Bidar News: SBI Security Agency Staff Attacked, One Killed
ಬೀದರ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್.ಬಿ.ಐ) ಸೆಕ್ಯೂರಿಟಿ ಏಜೆನ್ಸಿಯನ್ನು ಗುಂಡು ಹಾರಿಸಿ ಕೊಂದು 93 ಲಕ್ಷ ರೂಪಾಯಿ ದರೋಡೆ ಮಾಡಿರುವ ಘಟನೆ ನಡೆದಿದೆ.ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಸೆಕ್ಯೂರಿಟಿ ಸಿಬ್ಬಂದಿ ಖಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ವ್ಯಕ್ತಿಯನ್ನು ಗಿರೀಶ ಎಂದು ಗುರುತಿಸಲಾಗಿದೆ. ಗಾಯಗೊಂಡವರ ವಿವರ ಗೊತ್ತಾಗಿಲ್ಲ. ಬ್ಯಾಂಕಿನ ಕಚೇರಿ ಎದುರು ಗುಂಡೇಟು ತಗುಲಿ ಅವರು ಬಿದ್ದಿದ್ದರು. ಗುಂಡಿನ ದಾಳಿಯಿಂದ ಜನರು ಆಘಾತಕ್ಕೆ ಒಳಗಾಗಿದ್ದರು. ವಿಷಯ ತಿಳಿದು ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿ(District Collector’s Office) ಎದುರು ಸೇರಿದ್ದ ನೂರಾರು ಜನ ಅಲ್ಲಿ ಜಮಾಯಿಸಿದ್ದರು. ಪೊಲೀಸರು(police) ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.
ಬ್ಯಾಂಕ್‌ನ ಎಟಿಎಂಗೆ ಹಣ ತುಂಬುವ ಏಜೆನ್ಸಿ ಸಿಬ್ಬಂದಿ ಎಂದಿನಂತೆ ತಮ್ಮ ವಾಹನದಲ್ಲಿ ಬ್ಯಾಂಕಿಗೆ ಬಂದಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತರು ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಪ್ರತಿರೋಧ ತೋರಿದಾಗ ಖಾರದ ಪುಡಿ ಎರಚಿ, ಬಳಿಕ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸ್ಥಳದಲ್ಲಿದ್ದವರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ(Pradeep Gunti) ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಜೆ ಧಾವಿಸಿದ್ದಾರೆ.