ಹೈದರಾಬಾದ್: ಹರಿಯಾಣದ ರೀತಿಯಲ್ಲೇ ಮಹಾರಾಷ್ಟ್ರ, ಜಾರ್ಖಂಡ್ ನಲ್ಲೂ ಫಲಿತಾಂಶ ಬರಲಿದೆ ಎಂದು ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣಾ ಫಲಿತಾಂಶಗಳು ಹರಿಯಾಣ ಫಲಿತಾಂಶಗಳನ್ನು ಪುನರಾವರ್ತಿಸಲಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸಹಜ ಸ್ಥಿತಿಗೆ ಮರಳಿದ್ದು ಮಾತ್ರವಲ್ಲದೆ, ಅಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದೇ ಮಾದರಿಯಲ್ಲಿ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ನಲ್ಲಿ ಫಲಿತಾಂಶ ಬರಲಿದೆ ಎಂದು ಹೇಳಿದ್ದಾರೆ.
ಈ ಗೆಲುವಿಗೆ ನಾನು ಪ್ರಧಾನಿ ಮೋದಿ ಅವರನ್ನು ಅಭಿನಂದಿಸುತ್ತೇನೆ. ನಂಬಿಕೆಗೆ ಅರ್ಹನಾದ ನಾಯಕನನ್ನು ಜನರು ಯಾವಾಗಲೂ ಬೆಂಬಲಿಸುತ್ತಿರುತ್ತಾರೆ. ಇದಕ್ಕೆ ಪ್ರದಾನಿ ಮೋದಿ ಉದಾಹರಣಎ. ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಇದು ಸಾಬೀತಾಗಿದೆ. ವೋಟ್ ಪರ್ಸೆಂಟೇಜ್ ನಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಜಮ್ಮು ಕಾಶ್ಮೀರದಲ್ಲಿ ಹೊರಹೊಮ್ಮಿದೆ ಎಂದಿದ್ದಾರೆ.
“ಒಂದು ರಾಷ್ಟ್ರ ಒಂದು ಚುನಾವಣೆ” ಅನ್ನು ಬೆಂಬಲಿಸುವ ಅಗತ್ಯವಿದೆ. ಮೋದಿ ನಾಯಕತ್ವದಲ್ಲಿ ಭಾರತವು ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಹೇಳಿದ್ದಾರೆ.