ಮುಂಬಯಿ: ಟಾಟಾ ಸನ್ಸ್ ನ (Tata Sons) ಅಧ್ಯಕ್ಷ ರತನ್ ಟಾಟಾ (Ratan Tata) ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮುಂಬೈ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
86 ವರ್ಷ ವಯಸ್ಸಿನ ಕೈಗಾರಿಕೋದ್ಯಮಿ ಗಂಭೀರ ಆರೋಗ್ಯ ಸ್ಥಿತಿ ಎದುರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಮವಾರವಷ್ಟೇ ಟಾಟಾ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಿ, ಅವರ ಆರೋಗ್ಯದ ಬಗ್ಗೆ ವದಂತಿಗಳನ್ನು ತಳ್ಳಿ ಹಾಕಿದ್ದರು. ಪೋಸ್ಟ್‌ನಲ್ಲಿ, ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಸೂಚಿಸುವ ವರದಿಗಳನ್ನು ನಿರಾಕರಿಸಿದ್ದು “ಚಿಂತಿಸಬೇಡಿ, ನಾನು ಚೆನ್ನಾಗಿದ್ದೇನೆ ಎಂದಿದ್ದರು.
ರತನ್ ಟಾಟಾ ಭಾರತೀಯ ಉದ್ಯಮದಲ್ಲಿ ಅಪ್ರತಿಮ ವ್ಯಕ್ತಿ. 1991 ರಲ್ಲಿ ಭಾರತದ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಸಂಘಟಿತ ಸಂಸ್ಥೆಗಳಲ್ಲಿ ಒಬ್ಬರಾಗಿ ಅವರು ಗುರುತಿಸಿಕೊಂಡಿದ್ದರು.
2012ರ ವರೆಗೆ ಟಾಟಾ ಗ್ರೂಪನ್ನು ಮುನ್ನಡೆಸಿದರು. ಅವರ ಅಧಿಕಾರಾವಧಿಯಲ್ಲಿ, ಟಾಟಾ ಗ್ರೂಪ್ ಜಾಗತಿಕವಾಗಿ ವಿಸ್ತರಿಸಿತು. ಟೆಟ್ಲಿ, ಕೋರಸ್ ಮತ್ತು ಜಾಗ್ವಾರ್ ಲ್ಯಾಂಡ್ ರೋವರ್ ನಂತಹ ಪ್ರಮುಖ ಕಂಪನಿಗಳನ್ನು ಸ್ವಾಧೀನಪಡಿಸಿಕೊಂಡಿತು. ಟಾಟಾ 2012 ರಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರು. ಆದರೆ ನಂತರ ಟಾಟಾ ಸನ್ಸ್ ಮತ್ತು ಟಾಟಾ ಮೋಟಾರ್ಸ್ ಮತ್ತು ಟಾಟಾ ಸ್ಟೀಲ್ ಸೇರಿದಂತೆ ಇತರ ಸಮೂಹ ಕಂಪನಿಗಳ ಗೌರವಾನ್ವಿತ ಅಧ್ಯಕ್ಷರಾಗಿ ಆಗಿ ನೇಮಕಗೊಂಡರು.