ತಾನು ಬೌದ್ಧ ಧರ್ಮ ಸ್ವೀಕರಿಸೋದಾಗಿ ಸಚಿವ ಎಚ್ ಸಿ ಮಹದೇವಪ್ಪ ಘೋಷಿಸಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಹದೇವಪ್ಪ ತಾನಿರುವ ಧರ್ಮದಲ್ಲಿ ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಎಂಬರ್ಥಲ್ಲಿ ಬರೆದುಕೊಂಡಿದ್ದಾರೆ.
“ನಾನು ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಭೋದಿಸುವ ಧರ್ಮವನ್ನು ಇಷ್ಟ ಪಡುತ್ತೇನೆ. ಏಕೆಂದರೇ, ವ್ಯೆಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ. ಜಾತಿ, ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆಯಾಗುವ ಲಕ್ಷಣ ಕಾಣುತ್ತಿಲ್ಲ ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ. ಮುಂದೆ ಎಲ್ಲರೂಭಾರತದ ಮೂಲ ಧರ್ಮವಾದ ಬೌದ್ಧ ಧರ್ಮದ ಪ್ರಚಾರ ಮಾಡಬೇಕು” ಎಂದು ಬರೆದುಕೊಂಡಿದ್ದಾರೆ.

ಮಹದೇವಪ್ಪ ಬೌದ್ಧ ಧರ್ಮ ಸೇರಿದ್ದು ವಿಚಾರವಾಗದೇ ಹೋದರೂ, ಆತ ಹಿಂದೂ ಧರ್ಮದ ಮೇಲೆ ಆಡಿದ ಮಾತುಗಳು ತೀವೃ ಸ್ವರೂಪ ಪಡೆಯುವ ಸಾಧ್ಯತೆ ಇದೆ.