ಅತ್ಯಾಚಾರ ಆರೋಪಡ.ದಡಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮುನಿರತ್ನಗೆ ಜಾಮೀನು ಮಂಜೂರಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಮುನಿರತ್ನಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಮುನಿರತ್ನ ಜಾಮೀನ ಪಡೆದ ಬೆನ್ನಲ್ಲೇ ಅತ್ಯಾಚಾರದ ಕೇಸ್ ಅಡಿ ಜೈಲು ಹೊರಗಡೆಯೇ ಮರಳಿ ಬಂಧಿಸಲಾಗಿತ್ತು. ಇದೀಗ ಜಾಮೀನು ಮಂಜೂರಾಗಿದ್ದು ಇನ್ನು ಏನೇನಾಗಲಿದೆ ಕಾದು ನೋಡಬೇಕಿದೆ.