ಬ್ರಿಟನ್ನ ಖ್ಯಾತ ಗಾಯಕ ಲಿಯಾಮ್ ಪಾಯ್ನ್ ಹೋಟೆಲ್ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
31 ವರ್ಷದ ಅರ್ಜೆಂಟೀನಾದ ರಾಜಧಾನಿ ಬೋನಸ್ ಐರಿಸ್ ನಲ್ಲಿ ಲಿಯಾಮ್ ಉಳಿದಿದ್ದ ಹೋಟೆಲ್ ಕೊಠಡಿಯ ಬಾಲ್ಕನಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಡೀ ಇಂಗ್ಲೆಂಡ್ ನಲ್ಲಿ ಬೇಸರ ಹಾಗೂ ಅನುಮಾನಕ್ಕೆ ಕಾರಣವಾಗಿದೆ. ಲಿಯಾಮ್ ಸಾವಿಗೆ ಮುನ್ನ ಹೋಟೆಲ್ ಸಿಬ್ಬಂದಿಯಿಂದ ಬಂದಿದ್ದ ಕರೆಗಳು ಕೂಡ ಹಲವಾರು ಅನುಮಾನಗಳಿಗೆ ಕಾರಣವಾಗಿವೆ.
ಘಟನೆ ಬಗ್ಗೆ ಮಾಧ್ಯಮಗಳಿಗೆ ವರದಿ ನೀಡಿರುವ ಬೋನಸ್ ಐರಿಸ್ ಪೊಲೀಸರು, ಲಿಯಾಮ್, ನಗರದ ಕಾಸಾ ಸರ್ ಹೋಟೆಲ್ನ ಮೂರನೇ ಮಹಡಿಯ ತನ್ನ ಕೋಣೆಯ ಬಾಲ್ಕನಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಳಗೆ ಹಾರಿದ ಕೂಡಲೇ ಲಿಯಾಮ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಲಿಯಾಮ್, ನಿಧನ ಹೊಂದುವುದಕ್ಕೂ ಕೆಲ ಸಮಯ ಮುಂಚೆ ಕಾಸಾ ಸರ್ ಹೋಟೆಲ್ನ ಮ್ಯಾನೇಜರ್ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ‘ನಮ್ಮ ಹೋಟೆಲ್ ನಲ್ಲಿರುವ ವ್ಯಕ್ತಿ ಬಹಳ ಗಲಾಟೆ ಮಾಡುತ್ತಿದ್ದಾನೆ. ಹೋಟೆಲ್ನ ವಸ್ತುಗಳನ್ನು ಹಾಳು ಮಾಡುತ್ತಿದ್ದಾನೆ. ಸಿಬ್ಬಂದಿ ಮೇಲೆ ಹಲ್ಲೆ ಮಾಡುತ್ತಿದ್ದಾನೆ ಎಂದು ಕೂಡಲೇ ಬರುವಂತೆ ಮನವಿ ಮಾಡಿದ್ದರು. ಕೆಲವು ವರದಿಯಂತೆ ಪೊಲೀಸರು ಬಂದು ಬೆದರಿಸಿದ್ದರಿಂದಲೇ ಲಿಯಾಮ್ ಬಾಲ್ಕನಿಯಿಂದ ಕೆಳಗೆ ಹಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.