ಪಂಚಕುಲ: ಹರಿಯಾಣದ ರಾಜ್ಯಕ್ಕೆ ಸತತ ಎರಡನೇ ಬಾರಿಗೆ ಸಿಎಂ ಆಗಿ ನಯಾಬ್ ಸಿಂಗ್ ಸೈನಿ (Nayab Singh Saini) ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಇತರ ಸಿಎಂಗಳು, ಉಪ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಎನ್‌ಡಿಎ ನಾಯಕರು ಸೇರಿದಂತೆ ಹಲವಾರು ಗಣ್ಯರು ಸಾಕ್ಷಿಯಾಗಿದ್ದರು.
ಸಿಎಂ ನಯಾಬ್ ಸಿಂಗ್ ಸೈನಿ ನೇತೃತ್ವದ ಹೊಸ ಹರಿಯಾಣ ಸರ್ಕಾರದಲ್ಲಿ ಹಲವರು ಸಚಿವರಾಗಿಯೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮುಖ ಒಬಿಸಿ ನಾಯಕರಾಗಿರುವ ಸೈನಿ, ಈ ವರ್ಷದ ಆರಂಭದಲ್ಲಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಸಿಎಂ ಸ್ಥಾನದಿಂದ ಬದಲಿಸಿದಾಗ ಅಧಿಕಾರ ವಹಿಸಿಕೊಂಡಿದ್ದರು.