ಬಳ್ಳಾರಿ: ವಾಲ್ಮೀಕಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರು ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಈ ಮಧ್ಯೆ ಅವರು ತಮ್ಮನ್ನು ಜೈಲಿಗೆ ಕಳುಹಿಸಿದವರ ವಿರುದ್ಧ ಗುಡುಗಿದ್ದಾರೆ.
ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ. ನಾನು ಸಣ್ಣ ದೋಷ ಇಲ್ಲದೇ ಹೊರ ಬರುತ್ತೇನೆ ಎಂದು ಕಣ್ಣೀರು ಹಾಕಿದ್ದಾರೆ.
ಪರಪ್ಪನ ಅಗ್ರಹಾರದ ಜೈಲಿನ ಗೋಡೆ ಮೇಲೆ ಬಿಜೆಪಿ ನಾಯಕರ ಹೆಸರು ಬರೆದು ಬಂದಿರುವೆ. ಅವರೆಲ್ಲಾ ಜೈಲು ಪಾಲಾಗ್ತಾರೆ ಎಂದು ಗುಡುಗಿದ್ದಾರೆ.
ಈ ಸುಳ್ಳಿನ ಪ್ರಪಂಚದಲ್ಲಿ ಕೆಟ್ಟ ಕೆಲಸಕ್ಕೆ ಕೈ ಹಾಕಲು ಮುಂದಾಗಿದ್ದಾರೆ. ನಾನು ಹಲವು ಬಾರಿ ಜೈಲು ನೋಡಿದ್ದೇನೆ. ಒಂದು ಸುಳ್ಳು ತಗೊಂಡು ಬಂದು ನನ್ನ ಮೇಲೆ ಗೂಬೆ ಕೂರಿಸಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಮುಂದಿನ ದಿನಗಳಲ್ಲಿ ನೀವು ನೋಡ್ತಿರಿ, ಈ ಹಗರಣ ಅಂತ ಬಿಜೆಪಿಯ ಯಾರು ಯಾರು ಮಾಡ್ತಿದಾರಲ್ಲ ಅವರನ್ನು ಸುತ್ತಿಕೊಳ್ಳುತ್ತದೆ. ಅವರೆಲ್ಲರ ಹೆಸರನ್ನು ಪರಪ್ಪನ ಅಗ್ರಹಾರ ಜೈಲಿನ ಗೋಡೆ ಮೇಲೆ ಬರೆದು ಬಂದಿದ್ದೇನೆ. ಅವರೆಲ್ಲ ಜೈಲು ಪಾಲು ಆಗುತ್ತಾರೆ ಎಂದು ಗುಡುಗಿದ್ದಾರೆ.