ರಾಂಚಿ: ಜಾರ್ಖಂಡ್ ನಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದೆ. ಜಾರ್ಖಂಡ್ ನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಬೇರೆ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಅಖಾಡಕ್ಕೆ ಇಳಿಯಲು ಮುಂದಾಗಿವೆ.
ಸಿಎಂ ಹೇಮಂತ್ ಸೊರೆನ್ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯ ಬ್ಲಾಕ್ ಒಟ್ಟಾಗಿ ಸ್ಪರ್ಧಿಸಲು ಮುಂದಾಗಿದೆ. ಜಾರ್ಖಂಡ್ನಲ್ಲಿ ಕಾಂಗ್ರೆಸ್ ಮತ್ತು ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) 81 ವಿಧಾನಸಭಾ ಕ್ಷೇತ್ರಗಳ ಪೈಕಿ 70 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ. ಇನ್ನುಳಿದ 11 ಕ್ಷೇತ್ರಗಳಿಗೆ ಇತರ ಮೈತ್ರಿ ಪಾಲುದಾರರಾದ ಆರ್‌ಜೆಡಿ ಮತ್ತು ಎಡ ಪಕ್ಷಗಳೊಂದಿಗೆ ಟಿಕೆಟ್ ಹಂಚಿಕೆಯ ಮಾತುಕತೆ ನಡೆದಿದೆ.
ಹೇಮಂತ್ ಸೋರೆನ್ ಮತ್ತು ಕಾಂಗ್ರೆಸ್‌ನ ಜಾರ್ಖಂಡ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ. ಹೇಮಂತ್ ಸೊರೆನ್ ರಾಷ್ಟ್ರೀಯ ಜನತಾ ದಳಕ್ಕೆ ಎಷ್ಟು ಸ್ಥಾನಗಳನ್ನು ನೀಡಲಾಗುವುದು ಮತ್ತು ಎಡರಂಗವು ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬುವುದನ್ನು ಮಾತ್ರ ತಿಳಿಸಿಲ್ಲ.
ಜಾರ್ಖಂಡ್‌ನಲ್ಲಿ ನವೆಂಬರ್ 13ಮತ್ತು 20ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ 81 ಸ್ಥಾನಗಳಲ್ಲಿ ಜೆಎಂಎಂ 30, ಕಾಂಗ್ರೆಸ್ 16 ಮತ್ತು ಆರ್‌ಜೆಡಿ ಒಂದು ಸ್ಥಾನದಲ್ಲಿ ಗೆದ್ದಿದ್ದವು. ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.