ಕನ್ನಡ ನಟ, ಕಿಚ್ಚ ಸುದೀಪ್ ಅವರ ತಾಯಿ ನಿಧನರಾಗಿದ್ದಾರೆ.
ಸುದೀಪ್ ತಾಯಿ ಸರೋಜಾ ಅವರು ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ಇಂದು ಮುಂಜಾನೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಮಂಗಳೂರು ಮೂಲದವರಾಗಿದ್ದರು. ತುಳು ಅವರ ಮಾತೃಭಾಷೆಯಾಗಿತ್ತು. ಆಗಾಗ್ಗೆ ಕೆಲವು ಸಿನಿಮಾ ಸಂಬಂಧಿ ಕಾರ್ಯಕ್ರಮಗಳಲ್ಲಿ ಸುದೀಪ್ರ ತಾಯಿ ಭಾಗವಹಿಸುತ್ತಿದ್ದರು. ಮಗ ಲಾಂಚ್ ಮಾಡಿದ ಸಹೋದರಿಯ ಮಗನ ಸಿನಿಮಾ ಕಾರ್ಯಕ್ರಮಕ್ಕೂ ಅವರು ಆಗಮಿಸಿದ್ದರು. ತಾಯಿಯೊಂದಿಗೆ ಕಿಚ್ಚ ಉತ್ತಮ ಬಾಂಧವ್ಯ ಹೊಂದಿದ್ದರು. ತಾಯಿಯ ಪಾರ್ಥಿವ ಶರೀರವನ್ನು ಜೆಪಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು ಎನ್ನಲಾಗಿದೆ.