ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆಯ ನಂತರ ಈಗ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಜನಸಂಖ್ಯೆಗೆ ಸಂಬಂಧಿಸಿದಂತೆ ಮಹತ್ವದ ಕರೆ ನೀಡಿದ್ದಾರೆ.
ಪ್ರತಿಯೊಬ್ಬ ದಂಪತಿ 16 ಮಕ್ಕಳನ್ನು ಹೊಂದುವಂತೆ ಸಲಹೆ ನೀಡಿದ್ದಾರೆ. ಚೆನ್ನೈನಲ್ಲಿ ನಡೆದ ಹಿಂದೂ ಧಾರ್ಮಿಕ ಮತ್ತು ದತ್ತಿ ಮಂಡಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯರು ಹೊಸದಾಗಿ ಮದುವೆಯಾದ ದಂಪತಿಗೆ 16 ರೀತಿಯ ಆಸ್ತಿಯನ್ನು ಹೊಂದುವಂತೆ ಆಶೀರ್ವದಿಸುತ್ತಿದ್ದರು. ಹೀಗಾಗಿಯೇ 16 ರೀತಿಯ ಆಸ್ತಿಯ ಬದಲು 16 ಮಕ್ಕಳನ್ನು ಹೊಂದುವ ಸಮಯ ದೇಶಕ್ಕೆ ಬಂದಿದೆ ಎಂದು 16 ಮಕ್ಕಳನ್ನು ಹೇರುವಂತೆ ಹೇಳಿದ್ದಾರೆ.
ಭಾನುವಾರವಷ್ಟೇ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಹೆಚ್ಚುತ್ತಿರುವ ವೃದ್ಧ ಜನಸಂಖ್ಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಹೀಗಾಗಿ ದಕ್ಷಿಣದ ರಾಜ್ಯಗಳಲ್ಲಿನ ಕುಟುಂಬಗಳು ಹೆಚ್ಚಿನ ಮಕ್ಕಳನ್ನು ಹೊಂದುವಂತೆ ಒತ್ತಾಯಿಸಿದ್ದರು.