ಹುಬ್ಬಳ್ಳಿ: ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದ ಸಿ.ಪಿ. ಯೋಗೇಶ್ವರ್ ಈಗ ಪಕ್ಷೇತರರಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಹೀಗಾಗಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ವಿಚಾರವಾಗಿ ಜೆಡಿಎಸ್ ಹಾಗೂ ಬಿಜೆಪಿ ಮಧ್ಯೆ ಬಿರುಕು ಮೂಡಿದೆ. ಆದರೆ, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ.
ಸಿಪಿ ಯೋಗೇಶ್ವರ್ ಅವರು ವಿಧಾನ ಪರಿಷತ್ನ ನಾಮನಿರ್ದೇಶಿತ ಬಿಜೆಪಿ ಸದಸ್ಯರಾಗಿದ್ದು, ಈ ಬಾರಿ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಕ್ಷೇತ್ರವನ್ನು ಬಿಟ್ಟು ಕೊಡಲು ಜೆಡಿಎಸ್ ಮುಂದಾಗಿಲ್ಲ. ಇನ್ನೊಂದೆಡೆ ಹೈಕಮಾಂಡ್ ಕೂಡ ಜೆಡಿಎಸ್ ಕ್ಷೇತ್ರವಾಗಿದ್ದರಿಂದ ಅವರಿಗೆ ಬಿಟ್ಟು ಕೊಟ್ಟಿದೆ. ಹೀಗಾಗಿ ಜೆಡಿಎಸ್ ಈ ಕುರಿತು ನಿರ್ಧಾರ ಕೈಗೊಳ್ಳಬೇಕಿತ್ತು ಎಂದಿತ್ತು. ಈ ವೇಳೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿ ಸಹ ಸಿಪಿ ಯೋಗೇಶ್ವರ್ಗೆ ಆಫರ್ ನೀಡಿದ್ದರು. ಆದರೆ, ಯೋಗೇಶ್ವರ್ ಬಿಜೆಪಿಯಿಂದಲೇ ಸ್ಪರ್ಧೆ ಮಾಡುವುದಾಗಿ ಹೇಳಿ, ಟಿಕೆಟ್ ನಿರಾಕರಿಸಿದ್ದಾರೆ. ಈಗ ಬಿಜೆಪಿಯ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.