ಪ್ಯಾನ್ ಇಂಡಿಯಾ ಸ್ಟಾರ್ ನಟ ಪ್ರಭಾಸ್ ಅವರಿಗೆ ದೇಶ ಅಷ್ಟೇ ಅಲ್ಲದೇ, ವಿದೇಶದಲ್ಲಿಯೂ ಅಭಿಮಾನಿಗಳಿದ್ದಾರೆ. ಪ್ರತಿ ವರ್ಷ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಂಭ್ರಮದಿಂದ ಆಚರಿಸುತ್ತಾರೆ. ದೇಶ- ವಿದೇಶಗಳಲ್ಲೂ ಈ ಕಾರ್ಯಕ್ರಮ ನಡೆಯುತ್ತದೆ. ಈಗ ಟೋಕಿಯೋದಲ್ಲಿ ಅಭಿಮಾನಿಗಳು ಹುಟ್ಟು ಹಬ್ಬ ಆಚರಿಸಿದ್ದಾರೆ.
ಜಪಾನ್ ನಲ್ಲಿ ಚಿತ್ರಮಂದಿರವೊಂದರಲ್ಲಿ ಅಭಿಮಾನಿಗಳು ‘ರಾಧೆ ಶ್ಯಾಮ್’ ಸಿನಿಮಾ ನೋಡಿದ್ದಾರೆ. ನಂತರ ಪ್ರಭಾಸ್ ಗೆ ಹ್ಯಾಪಿ ಬರ್ತ್ಡೇ ಎಂದು ಶುಭಾಶಯ ತಿಳಿಸಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಭಾಸ್ ಅವರಿಗೆ ಈ ವರ್ಷದ ಹುಟ್ಟು ಹಬ್ಬದ ಸಂಭ್ರಮ ತುಂಬಾ ವಿಶೇಷತೆ ಪಡೆದಿದೆ. ಅವರು ನಟಿಸಿದ ‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್ ಹಿಟ್ ಆಗಿದೆ. ‘ಬಾಹುಬಲಿ’ ನಂತರ ಸತತ ಸೋಲು ಕಂಡಿದ್ದ ಅವರು, ‘ಸಲಾರ್’ ಮತ್ತು ‘ಕಲ್ಕಿ 2898 ಎಡಿ’ ಸಿನಿಮಾಗಳಿಂದ ಗೆಲುವಿನ ಟ್ರ್ಯಾಕ್ ಗೆ ಮರಳಿದ್ದರು. ಹೀಗಾಗಿ ಅಭಿಮಾನಿಗಳು ಅವರ ಮುಂದಿನ ಸಿನಿಮಾ ಬಗ್ಗೆ ಕಾತುರದಿಂದ ಕಾಯುತ್ತಿದ್ದಾರೆ.
ಪ್ರಭಾಸ್ ಅವರು ‘ದಿ ರಾಜಾ ಸಾಬ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬರ್ತ್ಡೇಗೂ ಮುಂಚಿತವಾಗಿ ಈ ಚಿತ್ರತಂಡದಿಂದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ.