ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಭದ್ರಕೋಟೆ. ಆ ಕ್ಷೇತ್ರದಿಂದ ಕುಮಾರಸ್ವಾಮಿ ಸತತ ಎರಡು ಬಾರಿ ಆಯ್ಕೆಯಾಗಿದ್ದರು. ಅವರ ರಾಜೀನಾಮೆಯಿಂದಲೇ ಕ್ಷೇತ್ರ ತೆರವಾಗಿತ್ತು. ಹೀಗಾಗಿ ಆ ಕ್ಷೇತ್ರದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಅವರಿಗೆ ಮಾತ್ರ ಇದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷದ ಸಭೆಯಲ್ಲಿ ಜೆಡಿಎಸ್ ನಿಂದಲೇ ಯೋಗೇಶ್ವರ್ ಗೆ ಟಿಕೆಟ್ ನೀಡುವ ನಿರ್ಧಾರವನ್ನು ಅವರು ಮಾಡಿದ್ದರು. ಬಿಜೆಪಿ ಕೂಡ ಯೋಗೇಶ್ವರ್ ಗೆ ಟಿಕೆಟ್ ನೀಡುವ ಅಭಿಪ್ರಾಯ ಹೊಂದಿದೆ. ಆದರೂ ಅವರ ನಿರ್ಧಾರದ ಹಿಂದಿನ ಸತ್ಯ ಏನು ಎಂಬುವುದೇ ತಿಳಿಯುತ್ತಿಲ್ಲ ಎಂದಿದ್ದಾರೆ.
ಯೋಗೇಶ್ವರ್ ನಮ್ಮ ಸಂಪರ್ಕಕ್ಕೆ ಬರುತ್ತಿಲ್ಲ. ಇನ್ನೂ ನಾಲ್ಕು ದಿನಗಳ ಸಮಯಾವಕಾಶವಿದ್ದು, ಏನಾಗಲಿದೆ ಎಂಬುವುದನ್ನು ಹೇಳಲು ಆಗುವುದಿಲ್ಲ ಎಂದಿದ್ದಾರೆ.