ವಿಜಯನಗರ: ಕಲುಷಿತ ನೀರು ಸೇವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯಲ್ಲಿ ನವಜಾತ ಶಿಶು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಈ ಘಟನೆ ಜಿಲ್ಲೆಯ (Vijayanagara) ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸುರೇಶ್(30), ಮಹಾಂತೇಶ್(45)ಗೌರಮ್ಮ(60), ಹನುಮಂತಪ್ಪ(38),8 ತಿಂಗಳ ಗಂಡು ಮಗು ಕಲುಷಿತ ನೀರಿಗೆ ಬಲಿಯಾಗಿದೆ. ಅಲ್ಲದೇ, ಗ್ರಾಮದಲ್ಲಿನ ಸುಮಾರು 50ಕ್ಕೂ ಅಧಿಕ ಜನರು ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ. ಹಿಂದಿನ ವಾರ ಕಲುಷಿತ ನೀರಿಗೆ ಮೂವರು ಬಲಿಯಾಗಿದ್ದರೆ, ಒಂದೇ ದಿನ ಇಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಜನರು ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ.
ಗರ್ಭಿಣಿ ನಿಂಗಮ್ಮ ಎಂಬ ಮಹಿಳೆ ಕೂಡ ಕಲುಷಿತ ನೀರಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಕ್ಕೆ ಸರಬರಾಜು ಆಗುವ ನಲ್ಲಿಯಲ್ಲಿ ಕಲುಷಿತ ನೀರು ಸೇರಿ, ಅದನ್ನು ಸೇವಿಸಿದ್ದರಿಂದಾಗಿ ಈ ದುರ್ಘಟನೆ ನಡೆದಿದೆ. ಇಷ್ಟೆಲ್ಲ ಆದರೂ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡದ್ದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.