ತುಮಕೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ನಿರಂತರವಾಗಿ (Rain) ಸುರಿಯುತ್ತಿದೆ. ಪರಿಣಾಮ ಹಲವಾರು ಅವಾಂತರಗಳು ನಡೆಯುತ್ತಿವೆ. ಹೀಗೆ ಮಳೆಯಿಂದಾಗಿ ಮನೆ ಗೋಡೆ (Wall) ಕುಸಿದು ಬಿದ್ದು ಮಣ್ಣಿನಡಿ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ತುಮಕೂರು (Tumakuru) ಜಿಲ್ಲೆ ಗುಬ್ಬಿ (Gubbi) ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಿ. ಹೊಸಹಳ್ಳಿ ನಿವಾಸಿ ಸಹನಾ (27) ಸಾವನ್ನಪ್ಪಿರುವ ದುರ್ದೈವಿ. ಮಹಿಳೆಯು ಬೆಳಗ್ಗೆ ಸ್ನಾನಕ್ಕೆಂದು ಹಳೆಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಗೋಡೆ ಕುಸಿದು ಸಹನಾ ಮಣ್ಣಿನಡಿ ಸಿಲುಕಿದ್ದರು. ಮಣ್ಣಿನಡಿ ಸಿಲುಕಿದ್ದ ಸಹನಾಳನ್ನ ಗ್ರಾಮಸ್ಥರು ರಕ್ಷಿಸಿ ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಕುರಿತು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.