ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಉತ್ತರಖಾಂಡ್ ನ ಹರಿದ್ವಾರದ ಗಂಗಾನದಿ ತೀರದಲ್ಲಿ ನವೆಂಬರ್ 16ರಂದು ಸಂಜೆ 6ಕ್ಕೆ ಅಂತಾರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ನಡೆಯಲಿದೆ.
ಕಾರ್ಯಕ್ರಮವನ್ನು ನಿಕಟಪೂರ್ವ ವಿಶೇಷ ಆಯುಕ್ತ ಆರ್.ಎಲ್. ದೀಪಕ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎ.ಅಮೃತರಾಜ್ ವಹಿಸಲಿದ್ದಾರೆ. ಅತಿಥಿಗಳಾಗಿ ಹಿಂದೂ ರಕ್ಷ, ಗೋ ಸೇನಾ ರಕ್ಷ ಉತ್ತರಾಖಂಡ್ ದ ರಾಜ್ಯಾಧ್ಯಕ್ಷ ಪ್ರಭಾಕರ್ ಮಂಜಯನಾಥ್, ಚಲನಚಿತ್ರ ನಟ ನೆನಪಿರಲಿ ಪ್ರೇಮ್, ಬಿಬಿಎಂಪಿಯ ಮಾಜಿ ಮಹಾಪೌರ ಎಂ.ಗೌತಮ್ ಕುಮಾರ್, ಮಹದೇವಪುರ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ, ಹಿನ್ನೆಲೆ ಗಾಯಕಿ ಎಂ.ಡಿ. ಪಲ್ಲವಿ, ಜಂಟಿ ಆಯುಕ್ತರಾದ ಲಕ್ಷ್ಮೀದೇವಿ, ಭೀಮಪುತ್ರಿ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಭೀಮಪುತ್ರಿ ರೇವತಿ ರಾಜ್ ಆಗಮಿಸಲಿದ್ದಾರೆ.
ಈ ವೇಳೆ ಬಿಬಿಎಂಪಿ ಆರೋಗ್ಯಾಧಿಕಾರಿ ಡಾ. ಸಂಧ್ಯಾ, ಆಡಳಿತಗಾರರ ಆಪ್ತ ಕಾರ್ಯದರ್ಶಿ ನಾರಾಯಣಸ್ವಾಮಿ, ಬಿಬಿಎಂಪಿ ಕನ್ನಡ ಸಂಘದ ಅಧ್ಯಕ್ಷ ಎಸ್. ಸಾಯಿ ಶಂಕರ್ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.