ಭೈರತಿ ರಣಗಲ್ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ನಟ ಸಿವರಾಜ್ ಕುಮಾರ್ ಕಣ್ಣಲ್ಲೇ ಭಯ ಬೀಳಿಸಿದ್ದಾರೆ.
ಮಫ್ತಿ’ ಸಿನಿಮಾ ಮೂಲಕ ಮೋಡಿ ಮಾಡಿದ್ದ ನಿರ್ದೇಶಕ ನರ್ತನ್ ಅವರು ಈಗ ‘ಭೈರತಿ ರಣಗಲ್’ ಮೂಲಕ ಅಭಿಮಾನಿಗಳಿಗೆ ರಸದೌತಣ ನೀಡಲು ಮುಂದಾಗಿದ್ದಾರೆ. ನವೆಂಬರ್ 15ರಂದು ‘ಭೈರತಿ ರಣಗಲ್’ ಸಿನಿಮಾ ಅದ್ದೂರಿಯಾಗಿ ತೆರೆಕಾಣಲಿದೆ. ಇಂದು ಚಿತ್ರದ ಟೀಸರ್ ನ್ನು ಬಿಡುಗಡೆ ಮಾಡಲಾಗಿದ್ದು, ಅಭಿಮಾನಿಗಳು ಸಾಕಷ್ಟು ಸಂತಸ ಪಡುತ್ತಿದ್ದಾರೆ.
ಶಿವಣ್ಣ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ನಿಂದಾಗಿ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾಯುತ್ತಿದ್ದಾರೆ. ಶಿವರಾಜ್ಕುಮಾರ್ ಅವರು ‘ಮಫ್ತಿ’ ಸಿನಿಮಾದಲ್ಲಿ ಭೈರತಿ ರಣಗಲ್ ಎಂಬ ಪಾತ್ರ ಮಾಡಿದ್ದರು. ಆ ಪಾತ್ರ ಜನರಿಗೆ ತುಂಬ ಇಷ್ಟ ಆಗಿತ್ತು. ಹೀಗಾಗಿ ಅದೇ ಪಾತ್ರವನ್ನು ಕೇಂದ್ರವಾಗಿ ಇಟ್ಟುಕೊಂಡು ನರ್ತನ್ ಕಥೆ ಹೆಣೆದಿದ್ದಾರೆ. ಹೀಗಾಗಿ ಈ ಚಿತ್ರ ಕೂಡ ಅಭಿಮಾನಿಗಳಿಗೆ ಇಷ್ಟವಾಗಬಹುದು ಎನ್ನಲಾಗುತ್ತಿದೆ.