ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಕೋರ್ಟ್ ತೀರ್ಪು ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದ್ದು, ಒಟ್ಟು 6 ಕೇಸ್ ಗಳಲ್ಲಿಯೂ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಕೊಟ್ಟಿದ್ದಾರೆ. ಹೀಗಾಗಿ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿ , ಶಿಕ್ಷೆ ಪ್ರಮಾಣವನ್ನೂ ನಾಳೆಗೆ ಕಾಯ್ದಿರಿಸಲಾಗಿದೆ.
ಹೀಗಾಗಿ ಪ್ರಕರಣದ ಎಲ್ಲ ಆರೋಪಿಗಳನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ನಾಳೆ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗುವುದಿಂದ ನಾಳೆ ಮಧ್ಯಾಹ್ನ 12.30ಕ್ಕೆ ಎಲ್ಲಾ ಆಪರಾಧಿಗಳನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.
ಸೀಜ್ ಆಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅಪರಾಧಿಗಳಾದ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಳ್ ಬಿಲಿಯಾ ಸೇರಿ ಹಲವರ ವಿರುದ್ಧ ಈ ಪ್ರಕರಣವಿದೆ.