ಜಾರ್ಖಂಡ್ ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಮಧ್ಯೆ ಅಖಾಡಕ್ಕೆ ಧೋನಿ ಇಳಿದಿರುವ ಕುರಿತು ವರದಿಯಾಗುತ್ತಿವೆ.
ಆದರೆ, ಅವರು ಅಖಾಡಕ್ಕೆ ಇಳಿದಿರುವುದು ರಾಜಕೀಯ ಮಾಡಲು ಅಲ್ಲ. ಬದಲಾಗಿ ಜಾರ್ಖಂಡ್ ಚುನಾವಣೆಯಲ್ಲಿ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕವಾಗಿದ್ದಾರೆ. ವಿಧಾನಸಭಾ ಚುನಾವಣೆಗೆ ಧೋನಿ ತಮ್ಮ ಫೋಟೋ ಬಳಸಲು ಚುನಾವಣಾ ಆಯೋಗಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಕೆ ರವಿಕುಮಾರ್ ಹೇಳಿದ್ದಾರೆ.
ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಜಾಹೀರಾತುಗಳಲ್ಲಿ ತಮ್ಮ ಫೋಟೊ ಬಳಸಿಕೊಳ್ಳಲು ಎಂಎಸ್ ಧೋನಿ ಚುನಾವಣಾ ಆಯೋಗಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾರೆ ಎಂದುರವಿಕುಮಾರ್ ರಾಂಚಿಯಲ್ಲಿ ಹೇಳಿದ್ದಾರೆ.
ಜಾರ್ಖಂಡ್ ನಲ್ಲಿ ನ. 13ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, 43 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.