ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ಆಶೀರ್ವಾದ ಪಡೆಯಲು ಭಕ್ತ ಸಾಗರ ಹರಿದು ಬರುತ್ತಿದೆ. ಅದರಲ್ಲೂ ವೀಕೆಂಡ್ ಇರುವ ಹಿನ್ನೆಲೆಯಲ್ಲಿ ಭಕ್ತ ಸಾಗರಿ ಹರಿದು ಬರುತ್ತಿದೆ.
ಭಾನುವಾರ ವೀಕೆಂಡ್ ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಿಯ ದರ್ಶನಕ್ಕೆ ಬರುತ್ತಿದ್ದಾರೆ. ತಡರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಬೆಳಗ್ಗೆ ದೇವಿ ದರ್ಶನ ಪಡೆದು ಪುನೀತರಾದರು. 1,000 ರೂ., 300 ರೂ. ಶುಲ್ಕವಿರುವ ವಿಶೇಷ ದರ್ಶನದ ಸಾಲುಗಳು ಕೂಡ ಭರ್ತಿಯಾಗಿದ್ದು, ಎಲ್ಲಿ ನೋಡಿದರಲ್ಲಿ ಭಕ್ತರೇ ಎನ್ನುವಂತಾಗಿದೆ.
ರಾಜ್ಯ, ದೇಶ-ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿ ದರ್ಶನ ಪಡೆಯುತ್ತಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಸನಾಂಬೆ ದೇವಿ ದರ್ಶನ ಪಡೆಯಲಿದ್ದಾರೆ.