ದೀಪಾವಳಿಗೆ ರೈತ ಸಂಕುಲಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ದೇಶದ ಪ್ರಮುಖ ಬೆಳೆಯಾಗಿರುವ ಭತ್ತಕ್ಕೆ ಕೇಂದ್ರ ಸರ್ಕಾರ ಬರೋಬ್ಬರಿ 2,300 ಬೆಂಬಲ ರೂ. ಹೆಚ್ಚಳ ಮಾಡಿ ಆದೇಶಿಸಿದೆ. ಈ ಸುದ್ದಿ ಕೇಳಿ ರೈತರು ಭಾರೀ ಸಂತಸ ಪಡುತ್ತಿದ್ದಾರೆ.
2013-14ರಿಂದ ಪ್ರತಿ ಕ್ವಿಂಟಲ್ ಭತ್ತಕ್ಕೆ 1,310 ರೂಪಾಯಿ ನೀಡಲಾಗುತ್ತಿತ್ತು. ಈಗ ಅದನ್ನು 2,300 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮವು ಈ ಬಾರಿಯ ಮುಂಗಾರು ಹಂಗಾಮಿನ ಬರೋಬ್ಬರಿ 185 ಲಕ್ಷ ಟನ್ ಭತ್ತ ಹಾಗೂ 124 ಲಕ್ಷ ಟನ್ ಅಕ್ಕಿ ಸಂಗ್ರಹ ಮಾಡುವ ಗುರಿ ಹೊಂದಿದೆ ಎನ್ನಲಾಗಿದೆ.
ಮುಂಗಾರಿನಲ್ಲಿ ಭತ್ತ ಸಂಗ್ರಹಿಸುವುದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ. ಈ ಬಾರಿ 14 ಎಲ್‌ಎಂಟಿ (ಮೆಟ್ರಿಕ್ ಟನ್) ಭತ್ತ ಸಂಗ್ರಹ ಮಾಡುವುದಕ್ಕೆ ಬೇಕಾಗಿರುವ ಸ್ಥಳಾವಕಾಶ ಇದೆ. ಅಲ್ಲದೇ ಪಂಜಾಬಿನಲ್ಲಿ ಸಂಗ್ರಹಿಸಲಾಗಿರುವ ಅಕ್ಕಿಯನ್ನು ಬೇಗ ಸ್ಥಳಾಂತರ ಮಾಡಲಾಗುತ್ತಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದೂಗಳ ಹಬ್ಬ ಬಂದ ಸಂದರ್ಭದಲ್ಲಿ ಮಾತ್ರ ಕೆಲವು ನಿರ್ದಿಷ್ಟ ಷರತ್ತುಗಳನ್ನು ಜಾರಿ ಮಾಡ್ತಿದೆ. ಈ ಸರ್ಕಾರದ ಪೌರುಷ ಹಿಂದೂ ಹಬ್ಬಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಹಸಿರು ಪಟಾಕಿಗೆ ಅವಕಾಶ ನೀಡಿದೆ.