ಅಮೆರಿಕ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ವಿಶ್ವದ ಚಿತ್ತ ಈಗ ಅಮೆರಿಕದತ್ತ ಇದೆ. ಮಾಜಿ ಅದ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಕಮಲಾ ಹ್ಯಾರಿಸ್ ಮಧ್ಯೆ ಭಾರೀ ಪೈಪೋಟಿ ಕಂಡು ಬರುತ್ತಿದ್ದು, ಕ್ಷಣ ಕ್ಷಣಕ್ಕೂ ವಾತಾವರಣ ರೋಚಕತೆ ಪಡೆಯುತ್ತಿದೆ.
ಭಾರತ ಮೂಲದ ಕಮಲಾ ಹ್ಯಾರಿಸ್ ಗೆಲ್ಲುತ್ತಾರೆ ಎಂದೇ ಎಲ್ಲರೂ ಭಾವಿಸಿದ್ದರು. ಭಾರತೀಯರು ಕಮಲಾ ಹ್ಯಾರಿಸ್ ಬೆನ್ನಿಗೆ ನಿಂತಿದ್ದಾರೆ ಎನ್ನುವ ನಿರೀಕ್ಷೆ ಹುಸಿಯಾಗ್ತಿದೆ. ಭಾರತ ಮೂಲದ ನಂಟು ಹೊಂದಿರುವ ಕಮಲಾ ಹ್ಯಾರಿಸ್, ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ವಿರುದ್ಧ ಹೋರಾಡುತ್ತಿದ್ದಾರೆ. ಈಗ ವರದಿಯಂತೆ, ಕಮಲಾ ಅವರ ಬೆನ್ನಿಗೆ ನಿಂತಿರುವ ಭಾರತೀಯರ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ ಅಮೆರಿಕ ರಾಜಕಾರಣ ತೀವ್ರ ಕುತೂಹಲ ಮೂಡಿಸಿದೆ.
ಇಷ್ಟು ದಿನಗಳ ಕಾಲ ಅಮೆರಿಕದಲ್ಲಿ ಇರುವ ಭಾರತೀಯರು ಕಮಲಾ ಹ್ಯಾರಿಸ್ ಅವರ ಬೆನ್ನಿಗೆ ನಿಂತಿದ್ದರು. ಅಲ್ಲದೆ ಡೊನಾಲ್ಡ್ ಟ್ರಂಪ್ ಸೋಲುವುದು ಗ್ಯಾರಂಟಿ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಈಗ ಸಮೀಕ್ಷೆಗಳ ವರದಿ ಕಮಲಾ ಹ್ಯಾರಿಸ್ ಅವರಿಗೆ ಆಘಾತ ನೀಡಿದ್ದು, ಡೊನಾಲ್ಡ್ ಟ್ರಂಪ್ ಪರವಾಗಿ ಭಾರತ ಮೂಲದ ಅಮೆರಿಕ ಮತದಾರರ ಬೆಂಬಲ ಹೆಚ್ಚಾಗುತ್ತಿದೆ ಎನ್ನಲಾಗುತ್ತಿದೆ. ಇದು ಅಮೆರಿಕ ಚುನಾವಣೆಯಲ್ಲಿ ದೊಡ್ಡ ಸದ್ದು ಮಾಡುತ್ತಿದೆ.