ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ಎಲ್ಲಾ ಫ್ರಾಂಚೈಸಿಗಳು ರಿಟೈನ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ಈ ಪಟ್ಟಿಯನ್ನು ಅಕ್ಟೋಬರ್ 31 ರೊಳಗೆ ಸಲ್ಲಿಸಬೇಕಿದ್ದು, ನಂತರ ಐಪಿಎಲ್ ಮೆಗಾ ಹರಾಜಿಗಾಗಿ ಆಟಗಾರರ ನೋಂದಣಿ ಪ್ರಕ್ರಿಯೆ ನಡೆಯಲಿದೆ.
ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಆಟಗಾರರ ಕನಿಷ್ಠ ಬಿಡ್ಡಿಂಗ್ ಬೆಲೆ 30 ಲಕ್ಷ ರೂ. ಇರಲಿದೆ. ಇದಕ್ಕೂ ಮುನ್ನ ಕನಿಷ್ಠ ಹರಾಜು ಮೊತ್ತ 20 ಲಕ್ಷ ರೂ. ಆಗಿತ್ತು. 50 ಲಕ್ಷ ರೂ., 1 ಕೋಟಿ ರೂ. ಹಾಗೂ 1.5 ಕೋಟಿ ರೂ. ಮೂಲ ಬೆಲೆಯಲ್ಲಿ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಬಹುದು. ಇಲ್ಲಿ ಗರಿಷ್ಠ ಮೂಲ ಬೆಲೆ 2 ಕೋಟಿ ರೂ. ನಿಗದಿ ಮಾಡಲಾಗಿದೆ.
ಈ ಮೂಲಕ ಹೊಸ ಆಟಗಾರರಿಗೆ ಹೆಚ್ಚಿನ ಮೊತ್ತ ಸಿಗುವಂತೆ ಮಾಡಲು ಬಿಸಿಸಿಐ ಮುಂದಾಗಿದೆ. ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯುವ ಸಾಧ್ಯತೆಯಿದೆ. ಅರಬ್ಬರ ನಾಡಿನಲ್ಲಿ ಮೆಗಾ ಹರಾಜು ನಡೆಯುವ ಸಾಧ್ಯತೆ ಇದೆ.