ರಾಜ್ಯದಲ್ಲಿ ತಗ್ಗಿದ್ದ ಮಳೆರಾಯನ ಆರ್ಭಟ ಈಗ ಮತ್ತೆ ಆರಂಭವಾಗಿದೆ. ಈಗ ಮತ್ತೆ ಹಲವು ಭಾಗಗಳಲ್ಲಿ ಮಳೆರಾಯನ ಆರ್ಭಟ ಶುರುವಾಗಿದ್ದು, ರೈತರು ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ರಾಜಧಾನಿ ಚೈನ್ನೈ, ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಇಲ್ಲಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 3ರ ವರೆಗೂ ಕೇರಳ, ತಮಿಳುನಾಡಿನ ಪುದುಚೇರಿ, ಕಾರೈಕಲ್, ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ರಾಜ್ಯದ ಅಲ್ಲಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 30, 31 ರಂದು ಕರಾವಳಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.