ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಈಗ ಆಂಜನೇಯನ ಅವತಾರ ತಾಳಲಿದ್ದಾರೆ ಎಂಬುವುದು ಸಿನಿ ರಂಗದಲ್ಲಿ ಕೇಳಿ ಬರುತ್ತಿದೆ.
ರಿಷಬ್ ಶೆಟ್ಟಿ ಅವರು ಆಂಜನೇಯನಾಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ ಎಂಬ ಸುದ್ದಿ ಬಹಿರಂಗವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರೀಕ್ಷೆ ಮೂಡಿಸಿರುವ ಜೈ ಹನುಮಾನ್ ಸಿನಿಮಾದಲ್ಲಿ ರಿಷಬ್ ಅವರು ಹನುಮಂತನಾಗಿ ನಟಿಸುತ್ತಿದ್ದಾರೆ. ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಚಿತ್ರತಂಡದಿಂದ ಫಸ್ಟ್ ಲುಕ್ ಪೋಸ್ಟರ್ ಅನಾವರಣವಾಗಿದ್ದು, ಇದನ್ನು ನೋಡಿರುವ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
‘ಹನುಮಾನ್’ ಸಿನಿಮಾ ಸೂಪರ್ ಹಿಟ್ ಆಯಿತು. ಸ್ಟಾರ್ ನಟರ ಸಿನಿಮಾಗಳಿಗೂ ಪೈಪೋಟಿ ನೀಡಿ ‘ಹನುಮಾನ್’ ಚಿತ್ರ ನೂರಾರು ಕೋಟಿ ರೂ. ಕಲೆಕ್ಷನ್ ಮಾಡಿತು. ನಿರ್ದೇಶಕ ಪ್ರಶಾಂತ್ ವರ್ಮಾ ಅವರು ಈಗ ಈ ಸಿನಿಮಾಗೆ ಸೀಕ್ವೆಲ್ ಮಾಡುತ್ತಿದ್ದಾರೆ. ಇದಕ್ಕೆ ‘ಜೈ ಹನುಮಾನ್’ ಎಂದು ಶೀರ್ಷಿಕೆ ಇಡಲಾಗಿದೆ. ಪ್ರಮುಖ ಪಾತ್ರದಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ.
ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದಲ್ಲಿನ ನಟನೆಗಾಗಿ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಹೀಗಾಗಿ ಅವರ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಅಲ್ಲದೇ, ರಿಷಬ್ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕೆಲಸಗಳಲ್ಲಿ ಕೂಡ ಬ್ಯುಸಿ ಆಗಿದ್ದಾರೆ.