ರಾಮನಗರ: ರಾಜ್ಯ ಕಾಂಗ್ರೆಸ್ ಸರ್ಕಾರ 2028ರ ವರೆಗೆ ಆಡಳಿತ ನಡೆಸುವುದಿಲ್ಲ. ಈ ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತೆ ನಾನು ಅಧಿಕಾರ ಅನುಭವಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಗೆದ್ದರೆ ಈ ಸರ್ಕಾರ ಇರುವುದಿಲ್ಲ. ಉಪಚುನಾವಣೆ ನಂತರ ರಾಜ್ಯದಲ್ಲಿ ಗವರ್ನರ್ ಅಧಿಕಾರ ಜಾರಿಯಾಗಬಹುದು ಎಂದಿದ್ದಾರೆ.
ಮೋದಿ ಸರ್ಕಾರ ಅಸ್ಥಿರಗೊಳಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಪ್ರಧಾನಿ ಮೋದಿಗಾಗಿ ನಾವು ಮೂರು ಕ್ಷೇತ್ರಗಳಲ್ಲಿ ಗೆಲ್ಲಬೇಕು. ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಮೇಲೆ ನಂಬಿಕೆ ಇದೆ ಮೋದಿ ದೇವೇಗೌಡರ ನಾಯಕತ್ವಕ್ಕೆ ಬೆಂಬಲ ಸಿಗಲಿದೆ ಎಂದಿದ್ದಾರೆ.
ಬಿಜೆಪಿ ಜೆಡಿಎಸ್ ಸಂಬಂಧ ಅಧಿಕಾರಕ್ಕಾಗಿ ಅಲ್ಲ. ಇದು ರಾಜ್ಯದ ಅಭಿವೃದ್ಧಿಗಾಗಿ ಆಗಿರುವುದು. ಬಿಜೆಪಿ ಜೆಡಿಎಸ್ ನಡುವೆ ಉತ್ತಮ ಬಾಂಧವ್ಯ ಇದೆ ಎಂದು ಹೇಳಿದ್ದಾರೆ.