ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ನಟ ದರ್ಶನ್ ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕಿದೆ. ಹೀಗಾಗಿ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ದರ್ಶನ್ ದಾಖಲಾಗಿದ್ದಾರೆ. ಈಗಾಗಲೇ ವೈದ್ಯರು ಹಲವಾರು ತಪಾಸಣೆ ನಡೆಸುತ್ತಿದ್ದಾರೆ.
ಈ ವಿಷಯವಾಗಿ ಮಾತನಾಡಿರುವ ವೈದ್ಯ ನವೀನ್ ಅಪ್ಪಾಜಿಗೌಡ, ‘ಬೆನ್ನು ನೋವಿನಿಂದ ದರ್ಶನ್ ಅವರು ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗಾಗಲೇ ಅವರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಕಾಲು ನೋವು ಹಾಗೂ ಬೆನ್ನು ನೋವು ಕೂಡ ಇದೆ. ಎಡಗಡೆ ಕಾಲಿನಲ್ಲಿ ವೀಕ್ ನೆಸ್ ಇದೆ. ತಪಾಸಣೆ ಮಾಡಿ, ಯಾವ ರೀತಿ ಚಿಕಿತ್ಸೆ ಬೇಕು ಎಂಬುದನ್ನು ನಿರ್ಧರಿಸುತ್ತೇವೆ. ಪೂರ್ತಿ ತಪಾಸಣೆ ಆದ ನಂತರ ಏನಾಗಿದೆ ಎಂಬುವುದು ತಿಳಿಯಲಿದೆ. ಎಂಆರ್ಐ, ಎಕ್ಸ್ರೇ ಮತ್ತು ರಕ್ತದ ಪರೀಕ್ಷೆ ಮಾಡಬೇಕಾಗುತ್ತದೆ ಎಂದಿದ್ದಾರೆ.
ಮತ್ತೊಮ್ಮೆ ಎಂಆರ್ ಐ ಮಾಡಬೇಕಾಗುತ್ತದೆ. ಸದ್ಯಕ್ಕೆ ಅವರಿಗೆ ತುಂಬ ನೋವು ಇದೆ. ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆಯೋ ಇಲ್ಲವೋ ಎಂಬುವುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. 48 ಗಂಟೆಯೊಳಗೆ ಎಲ್ಲ ರೀತಿಯ ರಿಪೋರ್ಟ್ ಕೈ ಸೇರುತ್ತವೆ. ತುಂಬ ನೋವು ಇರುವುದರಿಂದ ಔಷಧಿ ನೀಡಲು ಆರಂಭಿಸಿದ್ದೇವೆ’ ಎಂದು ಹೇಳಿದ್ದಾರೆ.