ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಹತ್ಯೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ.
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಎನ್ ಸಿಪಿ ನಾಯಕ ಬಾಬಾ ಸಿದ್ದಿಕ್ ಅವರಂತೆಯೇ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಮಹಿಳೆಯನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶನಿವಾರ ಸಂಜೆ ಅಪರಿಚಿತ ಸಂಖ್ಯೆಯಿಂದ ಈ ರೀತಿಯ ಸಂದೇಶ ಬಂದಿತ್ತು. ಕೂಡಲೇ ತನಿಖೆ ಕೈಗೊಂಡ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ, ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಭದ್ರತೆ ಹೆಚ್ಚಿಸಲಾಗಿದೆ. ಅಕ್ಟೋಬರ್ 12 ರಂದು ದಸರಾ ಸಂದರ್ಭದಲ್ಲಿ ಪಟಾಕಿ ಸಿಡಿಸುತ್ತಿದ್ದಾಗ ಬಾಬಾ ಸಿದ್ದಿಕಿ ಅವರ ಮಗ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಮೂವರು ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಅದೇ ಮಾದರಿಯಲ್ಲಿ ಹತ್ಯೆ ಮಾಡುವುದಾಗಿ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು.