ಬೆಂಗಳೂರು: ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ಭ್ರಮೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಭೂಸಂದ್ರದಲ್ಲಿ ನಡೆದಿದೆ. ಭೂಸಂದ್ರದ ಕೃಷ್ಣಮೂರ್ತಿ(40) ಸಾವನ್ನಪ್ಪಿರುವ ದುರ್ದೈವಿ. ದೀಪಾವಳಿ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ಕುರಿತು ಚರ್ಚೆ ನಡೆಸಿದ್ದಾನೆ. ಇದನ್ನೇ ನಂಬಿದ ವ್ಯಕ್ತಿ, ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತ ಕೃಷ್ಣಮೂರ್ತಿ ತನ್ನ ಪತ್ನಿಯನ್ನೇ ಕೊಲೆ ಮಾಡಿದ್ದ ಎನ್ನಲಾಗಿದೆ. ಎರಡು ವರ್ಷಗಳ ಹಿಂದೆ ಜೈಲು ಸೇರಿ, ಕಳೆದ 6 ತಿಂಗಳ ಹಿಂದೆ ಬಿಡುಗಡೆಯಾಗಿ ಹೊರ ಬಂದಿದ್ದ. ಆದರೆ, ಈಗ ಸ್ವರ್ಗದ ಬಗ್ಗೆ ತಲೆಯಲ್ಲಿ ಅದೇನೋ ಬಂದಿದೆಯೋ ಗೊತ್ತಿಲ್ಲ. ಸಾವಿಗೆ ಶರಣಾಗಿದ್ದಾನೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.