ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಹಾಡಿ ಹೊಗಳಿದ್ದಾರೆ.
ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಿಪಬ್ಲಿಕನ್ ಪಕ್ಷದ ನಾಯಕ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಫೋನ್ ನಲ್ಲಿ ಮಾಡಿ ಅಭಿನಂದಿಸಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ವಿಶ್ವ ಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದಾರೆ.
ತಂತ್ರಜ್ಞಾನ, ರಕ್ಷಣೆ, ಇಂಧನ, ಬಾಹ್ಯಾಕಾಶ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತೊಮ್ಮೆ ಒಟ್ಟಾಗಿ ಕೆಲಸ ಮಾಡುವ ಬಯಕೆಯನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಅವರು ಪ್ರಧಾನಿ ಮೋದಿಯವರಿಗೆ ಮತ್ತು ಭಾರತವನ್ನು ನಿಜವಾದ ಸ್ನೇಹಿತರೆಂದು ಪರಿಗಣಿಸುವುದಾಗಿ ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.
ಇಡೀ ಜಗತ್ತು ಪ್ರಧಾನಿ ಮೋದಿಯನ್ನು ಪ್ರೀತಿಸುತ್ತಿದೆ. ಭಾರತ ಅದ್ಭುತ ದೇಶ ಮತ್ತು ಪ್ರಧಾನಿ ಮೋದಿ ಅದ್ಭುತ ವ್ಯಕ್ತಿ ಎಂದು ಟ್ರಂಪ್ ಬಣ್ಣಿಸಿದ್ದಾರೆ. ಇದಕ್ಕೂ ಮುನ್ನ ಟ್ರಂಪ್ ಗೆಲುವು ಸಾಧಿಸುತ್ತಿದ್ದಂತೆ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ನನ್ನ ಸ್ನೇಹಿತನ ಐತಿಹಾಸಿಕ ಗೆಲುವಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಬರೆದಿದ್ದರು. ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ ಎಂದು ಪೋಸ್ಟ್ ಮಾಡಿದ್ದರು. ಟ್ರಂಪ್ ಇತ್ತೀಚೆಗೆ ಹಲವು ಬಾರಿ ಪ್ರಧಾನಿ ಮೋದಿ ಅವರನ್ನು ಹೊಗಳಿದ್ದಾರೆ. ಈಗ ಗೆಲುವು ಸಾಧಿಸುತ್ತಿದ್ದಂತೆ ಗುಣಗಾನ ಮಾಡಿದ್ದಾರೆ.