ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಹಾವೇರಿಯಲ್ಲಿ ಸಂಸದರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ತೇಜಸ್ವಿ ವಿರುದ್ಧ ದೂರು ದಾಖಲಿಸಲಾಗಿದೆ. ರೈತರೊಬ್ಬರ ಆತ್ಮಹತ್ಯೆ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ದೂರು ದಾಖಲಾಗಿದೆ.
ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ರಾಜಕೀಯ ಅಲೆಯನ್ನು ಸೃಷ್ಟಿಸಿದೆ. ಈ ಸಮಯದಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಆತ್ಮಹತ್ಯೆಗೆ ಕಾರಣ ವಕ್ಫ್ ನೋಟೀಸ್ ನೀಡಿರುವುದು ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಆದರೆ, ರೈತ ಸಾಲದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಈಗ ಸೂರ್ಯ ವಿರುದ್ಧ ಸುಳ್ಳು ಸುದ್ದಿ ಹರಡಿರುವ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
ನೋಟೀಸ್‌ಗೆ ಹೆದರಿ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತೇಜಸ್ವಿ ಸೂರ್ಯ ಟ್ವೀಟ್‌ನಲ್ಲಿ ಬರೆದಿದ್ದರು. ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ರೈತ ರುದ್ದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಸದರು ಟ್ವೀಟ್ ಮಾಡಿದ್ದರು. ಹೀಗಾಗಿ ಮಾಧ್ಯಮಗಳಲ್ಲೂ ಸುದ್ದಿ ಪ್ರಸಾರವಾಗಿತ್ತು.
ರುದ್ರಪ್ಪ ಆತ್ಮಹತ್ಯೆ ಬಳಿಕ ಪೊಲೀಸರು ಕೂಡ ಈ ಬಗ್ಗೆ ತನಿಖೆ ನಡೆಸಿದರು. ತನಿಖೆಯಿಂದ ರುದ್ರಪ್ಪ ಸಾವಿಗೆ ಕಾರಣ ವಕ್ಫ್ ನೋಟೀಸ್ ಅಲ್ಲ ಎನ್ನುವುದು ಸ್ಪಷ್ಟವಾಗಿದೆ. ರುದ್ರಪ್ಪ ಸಾವಿಗೆ ವಕ್ಫ್ ಕಾರಣ ಅಲ್ಲ ಎನ್ನುವುದನ್ನು ಸ್ಥಳೀಯ ಪೊಲೀಸರು ಸ್ಪಷ್ಟಪಡಿಸಿದ್ದಾರೆ.