ರಾಮನಗರ: ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.
ಚನ್ನಪಟ್ಟಣ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈಗಾಗಲೇ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನ ಬಹುತೇಕ ನಾಯಕರು ಬೀಡು ಬಿಟ್ಟಿದ್ದಾರೆ. ಈ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಮಧ್ಯೆ ಜಿದ್ದಾಜಿದ್ದಿಯ ಫೈಟ್ ನಡೆದಿದ್ದು, ನಾಯಕರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರಕ್ಕೆ ತೆರಳಿದ್ದ ಸಚಿವ ಜಮೀರ್ ಅಹ್ಮದ್ (Zameer Ahmed) ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನಲಾಗುತ್ತಿದೆ.
ಅವರು ಪ್ರಚಾರದ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ 500 ರೂ. ಹಣ ನೀಡಿರುವ ವಿಡಿಯೋ ವೈರಲ್ ಆಗಿದೆ. ಶನಿವಾರ ರಾತ್ರಿ ಚನ್ನಪಟ್ಟಣದ ಯಾರಬ್ ನಗರದಲ್ಲಿ ಸಿ.ಪಿ.ಯೋಗೇಶ್ವರ್ ಪರ ಜಮೀರ್ ಪ್ರಚಾರ ನಡೆಸುತಿದ್ದಾಗ ಹಣ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಾಂಗ್ರೆಸ್ ಸಚಿವರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.