ಚನ್ನಪಟ್ಟಣ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರವು ಖಜಾನೆಯನ್ನು ದಿವಾಳಿ ಮಾಡಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮೀ ಹಣ ಹಾಕಿಲ್ಲ. ಆದರೆ ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಅಕ್ರಮ ಎಸಗುತ್ತಿದೆ. ಇದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಬಳಸಿಕೊಳ್ಳುತ್ತಿದೆ. ಈ ಸರ್ಕಾರ ದಿವಾಳಿಯಾಗಿದೆ. ಚುನಾವಣೆ ಮುಗಿದ ಮೇಲೆ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ. ಐದು ಗ್ಯಾರಂಟಿಗಳಲ್ಲಿಒಂದು ಗ್ಯಾರಂಟಿ ಕಸಿದುಕೊಂಡು ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಚನ್ನಪಟ್ಟಣದ ಜನರು ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ. ಆ ಹುಡುಗ ನಿಮ್ಮ ಪರವಾಗಿ ಧ್ವನಿ ಎತ್ತುತ್ತಾನೆ. ನಿಮಗೆ ಯಾವುದೇ ಸಂಶಯ ಬೇಡ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟ ಮೇಲೆ ಯಾರು ಅಭ್ಯರ್ಥಿಯಾಗಿ ನಿಲ್ಲಬೇಕು ಎಂದು ಚರ್ಚೆ ನಡೆಯಿತು. ಡಿ.ಕೆ.ಶಿವಕುಮಾರ್ ನಾನೇ ಅಭ್ಯರ್ಥಿ ಎಂದರು. ನಾಮಪತ್ರ ಸಲ್ಲಿಸುವ ಒಂದು ದಿನಕ್ಕೆ ಮೊದಲು ಇದ್ದಕ್ಕಿದ್ದ ಹಾಗೆ ಬಿಜೆಪಿ ಅಭ್ಯರ್ಥಿಯನ್ನು ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.