ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಪೊಲೀಸರು ನೇಪಾಳದ ಗಡಿಯಲ್ಲಿ ಬಂಧಿಸಿದ್ದಾರೆ. ಆರೋಪಿ ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ ಶೂಟರ್ ಶಿವಕುಮಾರ್ ಅಲಿಯಾಸ್ ಶಿವನನ್ನು ನೇಪಾಳದ ಬಹ್ರೈಚ್ ಹತ್ತಿರ ಪೊಲೀಸರು ಬಂಧಿಸಿದ್ದಾರೆ.
ಅಲ್ಲದೇ, ಆತನ ನಾಲ್ವರು ಸಹಚರರನ್ನೂ ಅರೆಸ್ಟ್ ಮಾಡಲಾಗಿದೆ. ಪುಣೆಯಲ್ಲಿ ಕೂಡ ಮತ್ತಿಬ್ಬರನ್ನು ಬಂಧಿಸಲಾಗಿದೆ. ಈ ಮೂಲಕ ಈ ಪ್ರಕರಣದಲ್ಲಿ ಇಲ್ಲಿಯವರೆಗೆ 23 ಜನ ಆರೋಪಿಗಳನ್ನು ಬಂಧಿಸಿದಂತಾಗಿದೆ.
ತನಿಖೆಯ ವೇಳೆ ಪಿಸ್ತೂಲ್ ಪತ್ತೆಯಾಗಿದೆ. ಅಕ್ಟೋಬರ್ 12 ರಂದು ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಮೂವರು ಬಂದೂಕುಧಾರಿಗಳು ಮಹಾರಾಷ್ಟ್ರದ ಮಾಜಿ ಸಚಿವ ಸಿದ್ದಿಕಿ ಅವರನ್ನು ಹತ್ಯೆ ಮಾಡಿದ್ದರು. ಹತ್ಯೆಯ ಹಿಂದೆ ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಇದ್ದಾನೆ ಎನ್ನಲಾಗಿದ್ದು, ಆತ ಕೆನಡಾದಲ್ಲಿ ವಾಸಿಸುತ್ತಿದ್ದಾನೆ.