ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ(CJI) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಜೀವ್ ಖನ್ನಾ ಅವರು ದೆಹಲಿ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿಯಾದ ದೇವ್ ರಾಜ್ ಖನ್ನಾ ಅವರ ಮಗ. ಇವರು ದೆಹಲಿಯ ಪ್ರತಿಷ್ಠಿತ ಮಾಡರ್ನ್ ಸ್ಕೂಲ್ ನಲ್ಲಿ ಶಾಲಾ ಶಿಕ್ಷಣ ಪೂರೈಸಿದ್ದರು.
1980ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಅನಂತರ ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದರು. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದತಿ ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಕುರಿತು ಇವರು ತೀರ್ಪು ನೀಡಿದ್ದಾರೆ. ಈಗ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನಿರ್ಗಮಿತ ನ್ಯಾಯಮೂರ್ತಿಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್ ಖನ್ನಾ ನೇಮಕವಾಗಿದ್ದಾರೆ. ಇವರ ಅಧಿಕಾರ ಅವಧಿ ಮೇ. 13, 2025 ರ ವರೆಗೆ ಇರಲಿದೆ.