ರಾಮನಗರ: ಸಚಿವ ಜಮೀರ್ ಅಹ್ಮದ್ ಖಾನ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ, ವಿವಾದಕ್ಕೆ ಕಾರಣವಾಗಿದ್ದಾರೆ.
ಚನ್ನಪಟ್ಟಣದಲ್ಲಿ ನಡೆದ ಪ್ರಚಾರದ ಭಾಷಣದ ಸಂದರ್ಭದಲ್ಲಿ “ಕರಿಯ ಕುಮಾರಸ್ವಾಮಿ” ಎಂದು ಟೀಕಿಸಿ, ಜನಾಂಗೀಯ ನಿಂದನೆ ಮಾಡಿದ್ದಾರೆ.
ಭಾನುವಾರ ರಾತ್ರಿ ಚನ್ನಪಟ್ಟಣದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್ ಎಂದು ಉರ್ದುವಿನಲ್ಲಿ ಮಾತನಾಡಿದ್ದಾರೆ. ಹೀಗಾಗಿ ಜೆಡಿಎಸ್ ನಾಯಕರು, ಕಾರ್ಯಕರ್ತರು ಈ ಹೇಳಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಯೋಗೇಶ್ವರ್ ಮೊದಲು ನಮ್ಮ ಪಕ್ಷದಲ್ಲಿದ್ದರು. ಆನಂತರ ಕೆಲವು ಭಿನ್ನಾಭಿಪ್ರಾಯಗಳಿಂದಾಗಿ ಅವರು ಬಿಜೆಪಿಗೆ ಸೇರಿದ್ದರು. ಆದರೆ, ಈಗ ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಿದರೂ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ ಅಲ್ಲಿಗೆ ಹೋಗಿಲ್ಲ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡ್ತಾನಂತೆ. ಏ ಕುಮಾರಸ್ವಾಮಿ ನಿನ್ ರೇಟು ಹೇಳು, ಮುಸಲ್ಮಾನರು ಒಂದೊಂದ್ ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡುತ್ತಾರೆ. ಹಿಜಾಬ್ ವಿರುದ್ಧ ಮಾತನಾಡಿ, ಈಗ ನಮ್ಮ ಮತ ಕೇಳ್ತೀಯಾ? ಎಂದು ಗುಡುಗಿದ್ದಾರೆ.