ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರಿಗೆ ಪತ್ರದ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ರದ ಮೂಲಕ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಬೇಕಾದರೆ, ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಆಹ್ವಾನ ನೀಡುತ್ತಿದ್ದೇವೆ.
ಅವರಿಗಾಗಿ 30 ವಿಶೇಷ ಬಸ್ ಹಾಗೂ ವಿಮಾನ ಪ್ರಯಾಣ ವ್ಯವಸ್ಥೆ ಮಾಡಲಾಗುತ್ತಿದೆ. ನಮ್ಮ ರಾಜ್ಯದ 30 ಜಿಲ್ಲೆಗಳಿಗೂ ಭೇಟಿ ನೀಡಲಿ, ನಮ್ಮ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರ ದೂರವಾಣಿ ಸಂಖ್ಯೆಗಳನ್ನು ಒದಗಿಸಿ ಪತ್ರ ಬರೆಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಬಿಜೆಪಿಗೆ ಎಲ್ಲ ಚುನಾವಣೆಗಳಲ್ಲಿ ಸುಳ್ಳು ಪ್ರಮುಖ ಅಸ್ತ್ರವಾಗಿದೆ. ಹೀಗಾಗಿ ಪ್ರಧಾನಮಂತ್ರಿಯಂತಹ ಉನ್ನತ ಹುದ್ದೆಯಲ್ಲಿರುವವರು ಆಧಾರರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಆರೋಪಗಳನ್ನು ಸಾಬೀತುಪಡಿಸಲಿ. ನಾವು ಯಾವುದೇ ಶಿಕ್ಷೆಗೆ ಬೇಕಾದರೂ ಗುರಿಯಾಗುತ್ತೇವೆ ಎಂದು ಗುಡುಗಿದ್ದಾರೆ.
ಉನ್ನತ ಹುದ್ದೆಯಲ್ಲಿರುವವರು ಆಧಾರ ರಹಿಸ ಸುಳ್ಳು ಮಾತನಾಡಬಾರದು. ಇದು ಆ ಹುದ್ದೆಗೆ ಶೋಭೆಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.