ಬೆಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು, ಎಲ್ಲ ಪಕ್ಷಗಳು ತಮ್ಮ ತಂತ್ರ- ಪ್ರತಿತಂತ್ರ ಹೆಣೆಯುತ್ತಿವೆ.
ಮಹಾರಾಷ್ಟ್ರದ ಎಲ್ಲ 288 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಮಧ್ಯೆ ಹಲವು ಸಮೀಕ್ಷೆಗಳು ಹೊರ ಬೀಳುತ್ತಿವೆ. ಈಗ ಸಮೀಕ್ಷೆಯೊಂದು ಬಿಜೆಪಿ ಮೈತ್ರಿಕೂಟ ಮಹಾಯುತಿ ಭರ್ಜರಿ ಗೆಲುವು ದಾಖಲಿಸಲಿದೆ ಎಂದು ಮ್ಯಾಟ್ರಿಜ್ ಸಮೀಕ್ಷೆ ಭವಿಷ್ಯ ನುಡಿದಿದೆ.
ಬಿಜೆಪಿ ನೇತೃತ್ವದ ಮಹಾಯತಿಗೆ (ಬಿಜೆಪಿ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ- ಅಜಿತ್ ಪವಾರ್ ಬಣ-), ಶಿವಸೇನಾ (ಏಕ್‌ನಾಥ್ ಶಿಂಧೆ ಬಣ) ಗೆಲುವು ಸಾಧಿಸಬಹುದು ಎಂದು ಸಮೀಕ್ಷೆ ಹೇಲಿದೆ. 288 ಕ್ಷೇತ್ರಗಳ ಪೈಕಿ, ಮಹಾಯುತಿ ಮೈತ್ರಿಕೂಟಕ್ಕೆ 145 ರಿಂದ 165 ಸ್ಥಾನಗಳು ಸಿಗುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದೆ.
ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿಗೆ (ಕಾಂಗ್ರೆಸ್, ಶಿವಸೇನೆ (ಯುಬಿಟಿ), ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ ಪವಾರ್ ಬಣ, ಬಣ, ಉದ್ಧವ್ ಠಾಕ್ರೆ) ಪಕ್ಷಕ್ಕೆ ಸುಮಾರು 106 ರಿಂದ 126 ಸ್ಥಾನಗಳು ಸಿಗಬಹುದು ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. ಹೀಗಾಗಿ ಮಹಾರಾಷ್ಟ್ರದಲ್ಲಿ ಬಿಜೆಪಿ ಆತ್ಮವಿಶ್ವಾಸದಿಂದ ರಾಜಕೀಯ ತಂತ್ರ ರೂಪಿಸುತ್ತಿದೆ.