ಮೈಸೂರು: ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು, ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಆದರೆ, ನಮ್ಮಲ್ಲಿ ಹಣ ಇಲ್ಲದಿದ್ದರೆ ಈ 443 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ಹೇಗೆ ಪ್ರಾರಂಭಿಸುತ್ತಿದ್ದೇವು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 443.64 ಕೋಟಿಯ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಎಚ್.ಡಿ.ಕೋಟೆಯಲ್ಲಿ 443 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ್ದೇನೆ. ಶಂಕುಸ್ಥಾಪನೆಯನ್ನೂ ನೆರವೇರಿಸಿದ್ದೇನೆ. ಆದರೆ, ಬಿಜೆಪಿಯವರು ಸರ್ಕಾರಿ ನೌಕರಸ್ಥರಿಗೂ ಹಣ ನೀಡಲು ದುಡ್ಡಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಆದರೆ, ನಮ್ಮಲ್ಲಿ ಹಣ ಇಲ್ಲದಿದ್ದರೆ, 443 ಕೋಟಿ ರೂ. ಎಲ್ಲಿಂದ ಬಂತು ಹಾಗಾದರೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ ಕೋಟಿ ಕೋಟಿ ಫಲಾನುಭವಿಗಳು ನಮ್ಮ ಐದೂ ಗ್ಯಾರಂಟಿ ಯೋಜನೆಗಳ ಫಲವನ್ನು ಪ್ರತೀ ತಿಂಗಳೂ ಪಡೆಯುತ್ತಿದ್ದಾರೆ. ಆದರೂ ಬಿಜೆಪಿಯವರು ಗ್ಯಾರಂಟಿ ಯೋಜನೆಗಳಿಗೂ ಹಣ ಇಲ್ಲ ಎಂದು ಸುಳ್ಳು ಹರಡಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಬಿಜೆಪಿಗೆ ಸುಳ್ಳೇ ಮನೆಯ ದೇವರು ಎಂದಿದ್ದಾರೆ.