ಇತ್ತೀಚೆಗೆ ಬಿಡುಗಡೆಯಾದ ಅಮರನ್ ಚಿತ್ರ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಹೀಗಾಗಿ ಈ ಚಿತ್ರದಲ್ಲಿ ನಟಿಸಿರುವ ನಟಿ ಸಾಯಿ ಪಲ್ಲವಿಹಾಗೂ ಶಿವಕಾರ್ತಿಕೇಯನ್ ಯಶಸ್ಸಿನ ಹಾದಿ ತುಳಿದಿದ್ದಾರೆ.
ಈ ಇಬ್ಬರ ಕಾಂಬಿನೇಷನ್ನಲ್ಲಿ ಮೂಡಿಬಂದ ‘ಅಮರನ್’ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿತ್ತು. ಹತಾತ್ಮರಾಗಿರುವ ಭಾರತೀಯ ಸೇನಾ ಅಧಿಕಾರಿ ಮೇಜರ್ ಮುಕುಂದ್ ವರದರಾಜನ್ ಅವರ ಜೀವನದ ಕಥೆಯನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಈ ಸಿನಿಮಾಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ‘ಅಮರನ್’ ಸಿನಿಮಾದ ಮೂಲಕ ಸಾಯಿ ಪಲ್ಲವಿ ಮತ್ತು ಶಿವಕಾರ್ತಿಕೇಯನ್ ಅವರು ಗೆದ್ದು ಬೀಗುತ್ತಿದ್ದಾರೆ.
ಈ ಚಿತ್ರ ಉತ್ತಮ ವಿಮರ್ಶೆ ಪಡೆದಿದ್ದು ಮಾತ್ರವಲ್ಲದೇ ಬಾಕ್ಸ್ ಆಫೀಸ್ನಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಇಬ್ಬರ ಕೆಮಿಸ್ಟ್ರಿ ಜನರಿಗೆ ಇಷ್ಟವಾಗಿದೆ. ಹೀಗಾಗಿ ‘ಅಮರನ್’ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರ ತಂಡ ಕೂಡ ಈಗ ಸಂತಂಸ ವ್ಯಕ್ತಪಡಿಸುತ್ತಿದೆ.
ಹುತಾತ್ಮ ಸೇನಾನಿಯ ಸ್ಫೂರ್ತಿದಾಯಕ ಕಥೆಯನ್ನು ವಿವರಿಸುವ ಈ ಬಯೋಪಿಕ್ ಈ ವರ್ಷ ಸಕ್ಸಸ್ಫುಲ್ ಸಿನಿಮಾಗಳ ಪಟ್ಟಿಗೆ ಸೇರ್ಪಡೆ ಆಗಿದೆ. ಈ ಸಿನಿಮಾ ಅಕ್ಟೋಬರ್ 31ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿ ತೆರೆಕಂಡಿತು. ಎಲ್ಲ ಭಾಷೆಯಲ್ಲೂ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಕಮಲ್ ಹಾಸನ್ ಅವರ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಸಂಸ್ಥೆಯು ಸೋನಿ ಪಿಕ್ಚರ್ಸ್ ಸಹಯೋಗದಲ್ಲಿ ‘ಅಮರನ್’ ಚಿತ್ರ ನಿರ್ಮಾಣ ಮಾಡಿದೆ. ಶಿವಕಾರ್ತಿಕೇಯನ್ ಅವರು ಯೋಧನಾಗಿ ನಟಿಸಿದ್ದಾರೆ. ಪತ್ನಿಯ ಪಾತ್ರದಲ್ಲಿ ಸಾಯಿ ಪಲ್ಲವಿ ಅಭಿನಯಿಸಿದ್ದಾರೆ.