ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪರ ಬಹಿರಂಗವಾಗಿ ಮಾತನಾಡಿದ ನಂತರದಿಂದ ಶಾಸಕ ಜಿ.ಟಿ. ದೇವೇಗೌಡ ಅವರು ಜೆಡಿಎಸ್ ನಲ್ಲಿ ಹೆಸರಿಗೆ ಮಾತ್ರ ಎನ್ನುವಂತಾಗಿದೆ. ಸದ್ಯ ಹಲವು ವಿಚಾರಗಳ ಕುರಿತು ಸ್ವತಃ ಅವರೇ ಮಾತನಾಡಿದ್ದಾರೆ.
ಕೋರ್ ಕಮಿಟಿ ಅಧ್ಯಕ್ಷ ಸ್ಥಾನ ನನಗೆ ಹೆಸರಿಗೆ ಮಾತ್ರ ಇದೆ. ಆದರೆ, ನನ್ನನ್ನು ಬಿಟ್ಟು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕೋರ್ ಕಮಿಟಿ ಅಧ್ಯಕ್ಷ ಸ್ಥಾನ ಹೆಸರಿಗೆ ಮಾತ್ರ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರ 40 ಜನರ ಪಟ್ಟಿಯಲ್ಲಿ ನನ್ನ ಹೆಸರು ತೆಗೆದಿದ್ದಾರೆ. ಅದಕ್ಕಾಗಿ ನಾನು ಪ್ರಚಾರಕ್ಕೆ ಹೋಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ಯಾರ ಪರವಾಗಿ ಬ್ಯಾಟಿಂಗ್ ಮಾಡಿಲ್ಲ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದರು. ಆಗ ಕಾಂಗ್ರೆಸ್ ನವರು ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿದ್ದರು. ಎಫ್ ಐ ಆರ್ ಎಲ್ಲರ ಮೇಲೆ ಇದೆ. ಅದಕ್ಕೆ ರಾಜೀನಾಮೆ ಕೊಡಬೇಕು ಎಂದರೆ ಎಲ್ಲರೂ ಕೊಡಬೇಕು ಎಂದಿದ್ದೆ ಅಷ್ಟೇ ಎಂದು ಹೇಳಿದ್ದಾರೆ.
ಆದರೆ, ನನ್ನ ಮನಸ್ಸು ಒಡೆದಿಲ್ಲ. ನಾನು ಇಲ್ಲದೆ ಇದ್ದಾಗ ಕೋರ್ ಕಮಿಟಿ ಸಭೆ ಕರೆಯಲಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.