ಮೈಸೂರು: ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನರ್ ರಚನೆ ಇಲ್ಲ. ಆದರೆ, ಬಿ. ನಾಗೇಂದ್ರ ವಿಚಾರ ಮಾತ್ರ ಚರ್ಚೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹೀಗಾಗಿ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ಸಿಗಬಹುದು ಎಂಬುವುದನ್ನು ಸಿಎಂ ಹೇಳಿದ್ದಾರೆ. ಸದ್ಯ ಸಂಪುಟದಲ್ಲಿ ಯಾರಿಗೂ ಅವಕಾಶವಿಲ್ಲ. ಆ ಕುರಿತು ಚಿಂತನೆ ಹಾಗೂ ಚರ್ಚೆ ನಡೆದಿಲ್ಲ. ಹಲವಾರು ನಾಯಕರು ಬಿ. ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಹೀಗಾಗಿ ಆ ಕುರಿತಿ ಚಿಂತನೆ ನಡೆಸಿದ್ದೇವೆ ಎಂದಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿದ್ದು ಸಾಬೀತಾದರೆ ರಾಜಕೀಯವನ್ನೇ ಬಿಡುತ್ತೇನೆ. ಒಂದೇ ಒಂದು ಪೈಸೆ ಭ್ರಷ್ಟಾಚಾರ ಮಾಡಿದ್ದರೆ ರಾಜಕೀಯ ಬಿಡುತ್ತೇನೆ. ನರೇಂದ್ರ ಮೋದಿ ಪ್ರಧಾನಿ ಸ್ಥಾನ ತ್ಯಜಿಸುತ್ತಾರಾ ಕೇಳಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮೋದಿಗೆ ಕರ್ನಾಟಕ ಹಾಗೂ ಸಿದ್ದರಾಮಯ್ಯ ಟಾರ್ಗೆಟ್. ಕರ್ನಾಟಕ ಅತಿ ದೊಡ್ಡ ರಾಜ್ಯ. ಇಲ್ಲಿ ನಾವು 136 ಸ್ಥಾನ ಗೆದ್ದಿದ್ದೇವೆ. ಹತಾಶೆಯಿಂದ ನಮ್ಮನ್ನೇ ಮೋದಿ ಟಾರ್ಗೆಟ್ ಮಾಡುತ್ತಿದ್ದಾರೆ. ಅವರಿಗೆ ನಮ್ಮನ್ನು ಕಂಡರೆ ಭಯ. ಹೀಗಾಗಿ ನಮ್ಮನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ.