ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ ಮಾತಾ ವೈಷ್ಣೋದೇವಿ ದೇಗುಲಕ್ಕೆ ತೆರಳುವ ಕರ್ನಾಟಕದ ಯಾತ್ರಾರ್ಥಿಗಳಿಗೆ ಸಹಾಯ ಧನ ನೀಡಲು ಮುಜರಾಯಿ ಇಲಾಖೆ ನಿರ್ಧರಿಸಿದೆ.
ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ, ದೇವಸ್ಥಾನಗಳ ಆಸ್ತಿ ರಕ್ಷಣೆಗಾಗಿ ಸರ್ವೆ ಮಾಡಲು ಕೂಡ ನಿರ್ಧರಿಸಲಾಗಿದೆ.
ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ವಿವಾದದ ಬಳಿಕ ಮುಜುರಾಯಿ ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಸರ್ಕಾರ ಮುಂದಾಗಿದ್ದು, ಕೂಡಲೇ ಸರ್ವೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರಿನ ಎಂ.ಎಸ್. ಬಿಲ್ಡಿಂಗ್ ಎದುರು ಮುಜರಾಯಿ ಇಲಾಖೆಗೆ ಸೇರಿದ ಜಾಗದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಾಣಕ್ಕೆ ನಿರ್ಣಯ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಹಲವಾರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.