ಮುಂಬಯಿ: ಇಂದಿರಾ ಗಾಂಧಿ ಅವರು ಸ್ವರ್ಗದಿಂದ ಬಂದರೂ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಮರಳಿ ಸ್ಥಾಪಿಸಲು ಆಗುವುದಿಲ್ಲ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಪ್ರಚಾರದ ಸಮಾವೇಶದಲ್ಲಿ ಮಾತನಾಡಿದ ಅವರು, ‘ಇಂದಿರಾ ಗಾಂಧಿ ಅವರ ಮುಂದೆ ಅಮಿತ್ ಶಾ ಬಚ್ಚಾ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ‘ಕಳ್ಳರ ಸರ್ಕಾರ’. ಹೀಗಾಗಿ ಈ ಕಳ್ಳರನ್ನು ಸೋಲಿಸಬೇಕೆಂದು ಮನವಿ ಮಾಡಿದ್ದಾರೆ.
ಬಿಜೆಪಿ ಹಾಗೂ ಅದರ ಸೈದ್ಧಾಂತಿಕ ಪೋಷಕ ಸಂಸ್ಥೆ ಆರೆಸ್ಸೆಸ್ ದೇಶದ ಸ್ವಾತಂತ್ರ್ಯಕ್ಕಾಗಿ ಏನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಪ್ರತಿನಿತ್ಯ ಸರಾಸರಿ 7 ಸಾವಿರ ಜನ ರೈತರು ಸಾವನ್ನಪ್ಪುತ್ತಿದ್ದರೆ. ಆದರೂ ಸರ್ಕಾರ ಮೌನವಾಗಿದೆ. ಇವರಿಗೆ ಸಮಸ್ಯೆಗಳ ಪರಿಹಾರ ಬೇಡ. ಬರೀ ಅಧಿಕಾರ ಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.