ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
5 ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನ. 15ರೊಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು(Candidates) ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 3, ಡೆಪ್ಯುಟಿ ಮ್ಯಾನೇಜರ್ -2 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- ಪದವಿ, ಸ್ನಾತಕೋತ್ತರ ಪದವಿ,
ಡೆಪ್ಯುಟಿ ಮ್ಯಾನೇಜರ್ – ಪದವಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ.
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ 32-50 ವರ್ಷ, ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ 31 ವರ್ಷ ನಿಗದಿ ಪಡಿಲಿಸಲಾಗಿದೆ. ಇಂಟರ್ನಲ್ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಮಾಡಲಾಗಿದೆ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ ಮಾಸಿಕ 1,48,000 ಲಕ್ಷ ರೂ. ಹಾಗೂ ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಮಾಸಿಕ 56,100 ರೂ. ಸಂಬಳ ನಿಗದಿ ಪಡಿಸಲಾಗಿದೆ. ಲಿಖಿತ ಪರೀಕ್ಷೆಯ ನಂತರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ,
ಮುಖ್ಯ ಜನರಲ್ ಮ್ಯಾನೇಜರ್
ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್
ನಂ.3 & 4, I ಸ್ಟೇಜ್,
I ಹಂತ, B.T.M. ಲೇಔಟ್
ಬನ್ನೇರುಘಟ್ಟ ರಸ್ತೆ
ಅಂಚೆ ಪೆಟ್ಟಿಗೆ ಸಂಖ್ಯೆ 2924
ಡಿ.ಆರ್. ಕಾಲೇಜು P.O.
ಬೆಂಗಳೂರು – 560029 ವಿಳಾಸಕ್ಕೆ ಕಳುಹಿಸಬೇಕು.