ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)ದ ವಿಚಾರಣೆಗೆ ಹಾಜರಾಗಿದ್ದ ಗುತ್ತಿಗೆ ನೌಕರನನ್ನು ವಜಾ ಮಾಡಲಾಗಿದೆ.
ಮೈಸೂರು ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಬಿ.ಕೆ.ಕುಮಾರ್ ಹೆಚ್ಚುವರಿ ಕೆಲಸಕ್ಕಾಗಿ ಮುಡಾಗೆ ನೇಮಕವಾಗಿ ಬಂದಿದ್ದನು. ಮುಡಾದಲ್ಲಿ ಕೆಲಸ ಮಾಡುತ್ತ ಪಾಲಿಕೆಯಿಂದಲೂ ಸಂಬಳ ಪಡೆಯುತ್ತಿದ್ದ. ಕುಮಾರ್ ಏಕಕಾಲದಲ್ಲಿ ಎರಡು ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುತ್ತಿದ್ದ. ಹೀಗಾಗಿ ಆತ ನಿಯಮ ಉಲ್ಲಂಘಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಕುಮಾರ್ ನನ್ನು ವಜಾ ಮಾಡಲಾಗಿದೆ ಎಂದು ಆದೇಶಿಸಿದ್ದಾರೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇವಿನಕುಪ್ಪೆ ಗ್ರಾಮದ ಕುಮಾರ್ ಮುಡಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಕ್ರಮಗಳಲ್ಲಿ ಭಾಗಿಯಾಗಿದ್ದ ಎಂಬ ಆರೋಪವಿದೆ. ಹಿಂದಿನ ಆಯುಕ್ತರಿಗೆ ಖಾಲಿ ನಿವೇಶನಗಳ ಬಗ್ಗೆ ಮಾಹಿತಿ ಹಾಗೂ ಮಂಜೂರಾತಿ ಮಾಡಲು ಅಗತ್ಯವಿದ್ದ ದಾಖಲೆ ತಂದು ನೀಡುತ್ತಿದ್ದ ಎಂಬ ಆರೋಪ ಆತನ ಮೇಲಿದೆ.
ಕುಮಾರ್ ಮುಡಾ ಕಚೇರಿಯ ಎಲ್ಲ ವಿಭಾಗದಲ್ಲೂ ಪಾರುಪತ್ಯ ನಡೆಸುತ್ತಿದ್ದ ಎನ್ನಲಾಗಿದೆ. ಬೇಕಾದ ದಾಖಲೆಗಳನ್ನು ಕ್ಷಣಮಾತ್ರದಲ್ಲಿ ಆಯುಕ್ತರ ಮುಂದೆ ತರುತ್ತಿದ್ದ. ಹಿಂದಿನ ಆಯುಕ್ತರಾದ ನಟೇಶ್, ದಿನೇಶ್‌ಗೆ ಅಕ್ರಮದಲ್ಲಿ ಸಹಾಯ ಮಾಡಿರಬಹುದು ಎಂಬ ಶಂಕೆ ಇದೆ. ಹೀಗಾಗಿ ಇಡಿ ವಿಚಾರಣೆ ನಡೆಸಿದೆ.