ಬೆಳಗಾವಿ: ಐಪಿಎಸ್ (IPS) ಅಧಿಕಾರಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟು ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ (Belagavi) ಜಿಲ್ಲಾ ಸಿಇಎನ್ ಆರೋಪಿಸಿಯನ್ನು ಬಂಧಿಸಿದ್ದಾರೆ. ಆರೋಪಿಯು ರಾಜಸ್ಥಾನ ಮೂಲದ ಅರ್ಬಾಜ್ ಖಾನ್ ಎನ್ನಲಾಗಿದೆ. ಬಂಧಿತ ಆರೋಪಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನ್ಯಾಮಗೌಡ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದ.
ಆರೋಪಿಯು ನಕಲಿ ಖಾತೆಗಳ ಮೂಲಕ ಹಣಕ್ಕೆ ಬೇಡಿಕೆ ಇಟ್ಟು ವಂಚಿಸುತ್ತಿದ್ದ. ಹೀಗಾಗಿ ಬೆಳಗಾವಿ ಎಸ್ಪಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತೀಚಗೆ ಇಂಥವರ ಹಾವಳಿ ಹೆಚ್ಚಾಗಿದ್ದು, ನಕಲಿ ಖಾತೆ ತರೆದು ವಂಚಿಸುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.