ಬೆಳಗಾವಿ: ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಮಹಿಳೆಯ ಬಟ್ಟೆ ಬಿಚ್ಚಿ ಥಳಿಸಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣ ಪ್ರಕರಣ ಬೆಳಕಿಗೆ ಬಂದಿದೆ.
ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ (Assault) ಮಾಡಿರುವ ಘಟನೆ ನಗರದ ವಡ್ಡರವಾಡಿಯಲ್ಲಿ ನಡೆದಿದೆ. ಮಹಿಳೆ ವೇಶ್ಯಾವಾಟಿಕೆ (Prostitution) ಮಾಡುತ್ತಿದ್ದಾಳೆ ಎಂದು ಆರೋಪಿಸಿ ಪಕ್ಕದ ಮನೆಯವರು ಮನೆಗೆ ನುಗ್ಗಿ ತಾಯಿ ಹಾಗೂ ಮಗಳ ಮೇಲೆ ಹಲ್ಲೆ ನಡೆಸಿದ್ದಾರೆ.
ಪಕ್ಕದ ಅಷ್ಟೇಕರ್ ಕುಟುಂಬ ಹಲ್ಲೆ (Assault) ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ತಾಯಿ ಮತ್ತು ಮಗಳು ಎರಡು ದಿನ ಮಾಳಮಾರುತಿ ಠಾಣೆಗೆ ದೂರು ನೀಡಿದ್ದಾರೆ. ಆದರೆ ಠಾಣೆಯಲ್ಲಿ ದೂರು ಸ್ವೀಕರಿಸದ ಕಾರಣ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ನಗರ ಪೊಲೀಸ್ ಆಯುಕ್ತರ ಸೂಚನೆಯ ಮೇರೆಗೆ ಬಿಎನ್‌ಎಸ್ ಕಾಯ್ದೆಯಡಿ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.
ಬಾಲಕಿಯ ಜೊತೆಗೆ ನಾಲ್ಕು ವರ್ಷದಿಂದ ತಾಯಿ ಮಗಳು ಮನೆಯಲ್ಲಿ ವಾಸಿಸುತ್ತಿದ್ದರು. ಸಂಬಂಧ ಇಲ್ಲದವರು ಇವರ ಮನೆಗೆ ಹೋಗುತ್ತಾರೆ. ವೇಶ್ಯಾವಾಟಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ಮಡಿದ್ದಾರೆ. ನಾವು ಇರುವ ಮನೆಯನ್ನು ತೊರೆಯುವಂತೆ ಮಾಡಲು ಸುಖಾಸುಮ್ಮನೆ ಜಗಳ ತೆಗೆದು ಹಲ್ಲೆ ಮಾಡುತ್ತಿದ್ದಾರೆ. ಹೀಗಾಗಿ ನಮಗೆ ಜೀವ ಭಯ ಇದೆ ರಕ್ಷಣೆ ನೀಡಿ ಹಲ್ಲೆಗೊಳಗಾದವರು ದೂರು ನೀಡಿದ್ದಾರೆ.