ರಾಯಚೂರು: ಇಂದು ರಾಜ್ಯದಲ್ಲಿ ಪಿಡಿಒ ನಡೆಯುತ್ತಿದ್ದು, ಕೆಪಿಎಸ್ಸಿ ಕರ್ಮಕಾಂಡ ಮತ್ತೊಮ್ಮೆ ಬಯಲಾಗಿದೆ.
ಪರೀಕ್ಷೆಗೆ 24 ಅಭ್ಯರ್ಥಿಗಳು ಹಾಜರಾಗಿದ್ದರೆ, ಬಂದಿದ್ದು ಮಾತ್ರ 12 ಪ್ರಶ್ನೆ ಪತ್ರಿಕೆ. ಇದರಿಂದಾಗಿ ಅಭ್ಯರ್ಥಿಗಳು ಸಂಕಷ್ಟ ಅನುಭವಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಡಿಮೆ ಪ್ರಶ್ನೆ ಪತ್ರಿಕೆ ಕಳುಹಿಸಿದ್ದರಿಂದಾಗಿ ಪರೀಕ್ಷೆ ಬರೆಯಲು ಬಂದಿರುವ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆ ಸಿಗದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆರೋಪ ರಾಯಚೂರಿನ ಸಿಂಧನೂರಿನಲ್ಲಿ ಕೇಳಿ ಬಂದಿದೆ. ಒಂದು ಕೊಠಡಿಯಲ್ಲಿ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಆದರೆ, ರಾಯಚೂರು ಜಿಲ್ಲೆಯ ಸಿಂಧನೂರಿನ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ 12 ಪ್ರಶ್ನೆ ಪತ್ರಿಕೆಗಳನ್ನು ಮಾತ್ರ ಹಂಚಿಕೆ ಮಾಡಲಾಗಿದೆ.
ಇದರಿಂದಾಗಿ ಹಲವಾರು ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಸಿಗದೆ ತೊಂದರೆ ಅನುಭವಿಸಿದ್ದಾರೆ. ಹೀಗಾಗಿ ಸಿಂಧನೂರು-ಕುಷ್ಟಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸ್ ಹಾಗೂ ತಹಶೀಲ್ದಾರ್ ಅರುಣ್ ಕುಮಾರ್ ಅಭ್ಯರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು. ಈ ವೇಳೆ ತಹಶೀಲ್ದಾರ್ ಅಭ್ಯರ್ಥಿಗಳಿಗೆ ಅವಾಜ್ ಹಾಕಿದ್ದಾರೆ ಎಂಬ ಆರೋಪ ಕೂಡ ಕೇಳಿ ಬಂದಿದೆ.